Text copied!
Bibles in Kannada

ಯೋಹಾ 4:45-54 in Kannada

Help us?

ಯೋಹಾ 4:45-54 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಆತನು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಆತನನ್ನು ಸ್ವಾಗತಿಸಿದರು. ಯೆರೂಸಲೇಮಿನ ಪಸ್ಕಹಬ್ಬದ ಸಮಯದಲ್ಲಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ಅವರು ನೋಡಿದ್ದರು, ಏಕೆಂದರೆ, ಅವರೂ ಹಬ್ಬಕ್ಕೆ ಹೋಗಿದ್ದರು.
46 ಹೀಗಿರಲಾಗಿ, ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ಹಿಂತಿರುಗಿ ಬಂದನು. ಆಗ ಕಪೆರ್ನೌಮಿನಲ್ಲಿದ್ದ ಅರಮನೆಯ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.
47 ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, “ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು” ಎಂದು ಬೇಡಿಕೊಂಡನು.
48 ಯೇಸು ಅವನಿಗೆ “ನೀವು ಸೂಚಕ ಕಾರ್ಯಗಳನ್ನೂ ಮತ್ತು ಅದ್ಭುತ ಕಾರ್ಯಗಳನ್ನೂ ನೋಡದಿದ್ದರೆ ನಂಬುವುದೇ ಇಲ್ಲ” ಎಂದು ಹೇಳಿದನು.
49 ಆ ಅರಮನೆಯ ಅಧಿಕಾರಿಯು “ಆಯ್ಯಾ, ನನ್ನ ಮಗನು ಸಾಯುವುದಕ್ಕೆ ಮುಂಚೆ ನೀನು ಬರಬೇಕು” ಅನ್ನಲು
50 ಯೇಸು ಅವನಿಗೆ “ಹೋಗು ನಿನ್ನ ಮಗನು ಬದುಕುತ್ತಾನೆ” ಎಂದು ಹೇಳಿದನು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟು ಹೋದನು.
51 ಅವನು ಇನ್ನೂ ಘಟ್ಟಾ ಇಳಿದು ಹೋಗುತ್ತಿರುವಾಗಲೇ ಅವನ ಆಳುಗಳು ಅವನೆದುರಿಗೆ ಬಂದು ಅವನ ಮಗನು ಬದುಕಿರುವುದಾಗಿ ಅವನಿಗೆ ಹೇಳಿದರು.
52 ಅವನು ಎಷ್ಟು ಘಂಟೆಯಲ್ಲಿ ಚೇತರಿಸಿಕೊಂಡನು ಎಂದು ಅವರನ್ನು ಕೇಳಿದಾಗ ಅವರು, “ನಿನ್ನೆ ಮಧ್ಯಾಹ್ನ ಒಂದು ಘಂಟೆಗೆ ಜ್ವರವು ಅವನನ್ನು ಬಿಟ್ಟಿತು” ಎಂದರು.
53 ಆಗ “ನಿನ್ನ ಮಗನು ಬದುಕುತ್ತಾನೆ” ಎಂದು ಯೇಸು ತನಗೆ ಹೇಳಿದ ತಾಸಿನಲ್ಲಿಯೇ ಅದು ಸಂಭವಿಸಿತೆಂದು ಆ ತಂದೆಯು ತಿಳಿದುಕೊಂಡದ್ದರಿಂದ ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು.
54 ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ.
ಯೋಹಾ 4 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019