Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 5

ಯೋಹಾ 5:26-31

Help us?
Click on verse(s) to share them!
26ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ.
27ಮಗನು ಮನುಷ್ಯಕುಮಾರನಾಗಿರುವುದರಿಂದ ನ್ಯಾಯತೀರ್ಪು ಮಾಡುವ ಅಧಿಕಾರವನ್ನೂ ತಂದೆ ಆತನಿಗೆ ಕೊಟ್ಟಿದ್ದಾನೆ.
28ಅದಕ್ಕೆ ಆಶ್ಚರ್ಯಪಡಬೇಡಿರಿ. ಒಂದು ಕಾಲ ಬರುತ್ತದೆ, ಆಗಸಮಾಧಿಗಳಲ್ಲಿರುವವರೆಲ್ಲಾ ಆತನ ಸ್ವರವನ್ನು ಕೇಳಿ,
29ಎದ್ದು ಹೊರಗೆ ಬರುವರು. ಒಳ್ಳೆಯದನ್ನು ಮಾಡಿದವರಿಗೆ ನಿತ್ಯಜೀವಕ್ಕಾಗಿ ಪುನರುತ್ಥಾನವಾಗುವುದು. ಕೆಟ್ಟದ್ದನ್ನು ಮಾಡಿದವರು ಖಂಡನೆಗಾಗಿ ಪುನರುತ್ಥಾನವನ್ನೂ ಹೊಂದುವರು.
30“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.
31ನನ್ನ ವಿಷಯವಾಗಿ ನಾನೇ ಸಾಕ್ಷಿ ಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.

Read ಯೋಹಾ 5ಯೋಹಾ 5
Compare ಯೋಹಾ 5:26-31ಯೋಹಾ 5:26-31