Text copied!
Bibles in Kannada

ಯೋಹಾ 5:30-36 in Kannada

Help us?

ಯೋಹಾ 5:30-36 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 “ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.
31 ನನ್ನ ವಿಷಯವಾಗಿ ನಾನೇ ಸಾಕ್ಷಿ ಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.
32 ನನ್ನ ವಿಷಯವಾಗಿ ಸಾಕ್ಷಿ ಹೇಳುವವನು ಮತ್ತೊಬ್ಬನಿದ್ದಾನೆ. ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.
33 ನೀವು ಯೋಹಾನನ ಬಳಿಗೆ ದೂತರನ್ನು ಕೇಳಿಕೊಂಡು ಬರುವುದಕ್ಕೆ ಕಳುಹಿಸಿದಿರಿ. ಅವನು ಸತ್ಯಕ್ಕೆ ಸಾಕ್ಷಿ ಹೇಳಿದನು.
34 ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ಸ್ವೀಕರಿಸುವುದಿಲ್ಲ. ಆದರೂ ನಿಮಗೆ ರಕ್ಷಣೆಯಾಗಬೇಕೆಂದು ಇದನ್ನು ನಿಮಗೆ ಹೇಳಿದ್ದೇನೆ.
35 ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.
36 ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
ಯೋಹಾ 5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019