Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 5

ಯೋಹಾ 5:30-47

Help us?
Click on verse(s) to share them!
30“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.
31ನನ್ನ ವಿಷಯವಾಗಿ ನಾನೇ ಸಾಕ್ಷಿ ಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.
32ನನ್ನ ವಿಷಯವಾಗಿ ಸಾಕ್ಷಿ ಹೇಳುವವನು ಮತ್ತೊಬ್ಬನಿದ್ದಾನೆ. ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.
33ನೀವು ಯೋಹಾನನ ಬಳಿಗೆ ದೂತರನ್ನು ಕೇಳಿಕೊಂಡು ಬರುವುದಕ್ಕೆ ಕಳುಹಿಸಿದಿರಿ. ಅವನು ಸತ್ಯಕ್ಕೆ ಸಾಕ್ಷಿ ಹೇಳಿದನು.
34ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ಸ್ವೀಕರಿಸುವುದಿಲ್ಲ. ಆದರೂ ನಿಮಗೆ ರಕ್ಷಣೆಯಾಗಬೇಕೆಂದು ಇದನ್ನು ನಿಮಗೆ ಹೇಳಿದ್ದೇನೆ.
35ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.
36ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
37ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಸ್ವರವನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ.
38ಆತನ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಆತನು ಕಳುಹಿಸಿದಾತನನ್ನು ನೀವು ನಂಬದೇ ಇದ್ದೀರಿ.
39ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.
40ಆದರೂ ಜೀವ ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಮನಸ್ಸಿಲ್ಲ.
41“ನಾನು ಮನುಷ್ಯರಿಂದ ಬರುವ ಪ್ರಶಂಸೆಯನ್ನು ಸ್ವೀಕರಿಸುವುದಿಲ್ಲ,
42ಆದರೆ ನಿಮ್ಮನ್ನು ನಾನು ಬಲ್ಲೆನು. ದೇವರ ಪ್ರೀತಿ ನಿಮ್ಮೊಳಗೆ ಇಲ್ಲವೆಂದು ನನಗೆ ತಿಳಿದಿದೆ.
43ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ ಆದರೂ ನನ್ನನ್ನು ನೀವು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ಅವನನ್ನು ನೀವು ಸ್ವೀಕರಿಸುತ್ತೀರಿ.
44ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?
45ನಾನು ತಂದೆಯ ಮುಂದೆ ನಿಮ್ಮ ಮೇಲೆ ಅಪವಾದ ಹೊರಿಸುತ್ತಿದ್ದೇನೆಂದು ತಿಳಿಯಬೇಡಿರಿ. ನಿಮ್ಮ ಮೇಲೆ ಅಪವಾದ ಹೊರಿಸುವವನು ಒಬ್ಬನಿದ್ದಾನೆ; ಅವನೇ ನೀವು ನಿರೀಕ್ಷೆಯಿಟ್ಟಿರುವ ಮೋಶೆ!
46ಅವನು ನನ್ನ ವಿಷಯವಾಗಿ ಬರೆದನು, ಆದುದರಿಂದ ನೀವು ಮೋಶೆಯನ್ನೂ ನಂಬುವವರಾಗಿದ್ದರೆ ನನ್ನನ್ನೂ ನಂಬುತ್ತಿದ್ದಿರಿ.
47ಅವನು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ನೀವು ನಂಬದಿದ್ದರೆ ನಾನು ಹೇಳುವ ಮಾತುಗಳನ್ನು ಹೇಗೆ ನಂಬುವಿರಿ?” ಎಂದನು.

Read ಯೋಹಾ 5ಯೋಹಾ 5
Compare ಯೋಹಾ 5:30-47ಯೋಹಾ 5:30-47