Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 5

ಯೋಹಾ 5:34-39

Help us?
Click on verse(s) to share them!
34ನಾನಂತೂ ನನಗೆ ಬೇಕಾದ ಸಾಕ್ಷಿಯನ್ನು ಮನುಷ್ಯರಿಂದ ಸ್ವೀಕರಿಸುವುದಿಲ್ಲ. ಆದರೂ ನಿಮಗೆ ರಕ್ಷಣೆಯಾಗಬೇಕೆಂದು ಇದನ್ನು ನಿಮಗೆ ಹೇಳಿದ್ದೇನೆ.
35ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.
36ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.
37ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಸ್ವರವನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ.
38ಆತನ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಆತನು ಕಳುಹಿಸಿದಾತನನ್ನು ನೀವು ನಂಬದೇ ಇದ್ದೀರಿ.
39ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.

Read ಯೋಹಾ 5ಯೋಹಾ 5
Compare ಯೋಹಾ 5:34-39ಯೋಹಾ 5:34-39