Text copied!
Bibles in Kannada

ಯೋಹಾ 5:5-19 in Kannada

Help us?

ಯೋಹಾ 5:5-19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಲ್ಲಿ ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು.
6 ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದನು.
7 ಅದಕ್ಕೆ ಆ ರೋಗಿಯು “ಆಯ್ಯಾ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ಯಾರೂ ಇಲ್ಲ. ನಾನು ಹೋಗುವುದರೊಳಗೆ ನನಗಿಂತ ಮೊದಲು ಮತ್ತೊಬ್ಬನು ಇಳಿಯುತ್ತಾನೆ” ಎಂದನು.
8 ಯೇಸು ಅವನಿಗೆ, “ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ” ಎಂದು ಹೇಳಿದನು.
9 ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಅಂದು ಸಬ್ಬತ್ ದಿನವಾಗಿತ್ತು,
10 ಆದುದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ, “ಈ ದಿನ ಸಬ್ಬತ್ ದಿನವಾದುದರಿಂದ ನೀನು ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆಯೆಂದು” ಹೇಳಿದ್ದಕ್ಕೆ,
11 ಅವನು, “ನನ್ನನ್ನು ಸ್ವಸ್ಥಮಾಡಿದವನೇ ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ನನಗೆ ಹೇಳಿದನು” ಎಂದನು.
12 ಅದಕ್ಕೆ ಯೆಹೂದ್ಯರು ಅವನಿಗೆ, “ಅದನ್ನು ಎತ್ತಿಕೊಂಡು ನಡೆ ಎಂದು ನಿನಗೆ ಹೇಳಿದ ಮನುಷ್ಯನು ಯಾರು?” ಎಂದು ಕೇಳಿದರು.
13 ಆದರೆ ಆತನು ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ, ಏಕೆಂದರೆ, ಯೇಸು ಆ ಸ್ಥಳದಲ್ಲಿ ಇದ್ದ ಜನರ ಗುಂಪಿನ ಮಧ್ಯದಲ್ಲಿ ಮರೆಯಾದನು.
14 ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ;ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.
15 ಆ ಮನುಷ್ಯನು ಅಲ್ಲಿಂದ ಹೋಗಿ, ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.
16 ಆದಕಾರಣ ಯೆಹೂದ್ಯರು, ಯೇಸು ಸಬ್ಬತ್ ದಿನಗಳಲ್ಲಿ ಇಂಥಾ ಕಾರ್ಯಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸತೊಡಗಿದರು.
17 ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ” ಎಂದು ಹೇಳಿದನು.
18 ಯೇಸು ಈ ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು.
19 ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಮಗನು ಮಾಡುತ್ತಾನೆಯೇ, ಹೊರತು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ಆತನು ಯಾವುದನ್ನೆಲ್ಲಾ ಮಾಡುವನೋ ಹಾಗೆಯೇ ಮಗನೂ ಮಾಡುತ್ತಾನೆ.
ಯೋಹಾ 5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019