Text copied!
Bibles in Kannada

ಯೋಹಾ 6:16-27 in Kannada

Help us?

ಯೋಹಾ 6:16-27 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸಂಜೆಯಾದಾಗ ಆತನ ಶಿಷ್ಯರು ಸಮುದ್ರದ ದಡಕ್ಕೆ ಬಂದು,
17 ದೋಣಿಯನ್ನು ಹತ್ತಿ, ಸಮುದ್ರ ಮಾರ್ಗವಾಗಿ ಕಪೆರ್ನೌಮಿನ ಕಡೆಗೆ ಹೊರಟರು. ಆಗಲೇ ಕತ್ತಲಾಗಿತ್ತು ಆದರೆ ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.
18 ಬಿರುಗಾಳಿ ಬೀಸುತ್ತಿದ್ದುದರಿಂದ ಸಮುದ್ರವು ಅಲ್ಲೋಲಕಲ್ಲೋಲವಾಯಿತು.
19 ಹೀಗಿರಲಾಗಿ ಅವರು ಹುಟ್ಟು ಹಾಕುತ್ತಾ ಸುಮಾರು ಒಂದು ಹರದಾರಿ ದೂರ ಹೋದ ಬಳಿಕ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವುದನ್ನು ನೋಡಿ ಭಯಪಟ್ಟರು.
20 ಆದರೆ ಯೇಸು ಅವರಿಗೆ, “ಭಯಪಡಬೇಡಿರಿ, ನಾನೇ!” ಎಂದನು.
21 ಆಗ ಆತನನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಆ ಕ್ಷಣವೇ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಮುಟ್ಟಿತು.
22 ಮರುದಿನ ಸಮುದ್ರದ ಆಚೇಕಡೆಯಲ್ಲಿ ನಿಂತಿದ್ದ ಜನರು ಅಲ್ಲಿ ಒಂದೇ ದೋಣಿ ಲಭ್ಯವಿದೆ ಇದೆ, ಮತ್ತು ಯೇಸು ತನ್ನ ಶಿಷ್ಯರ ಸಂಗಡ ಆ ದೋಣಿಯಲ್ಲಿ ಹತ್ತಲಿಲ್ಲವೆಂದೂ ಅವರಿಗೆ ಅರಿವಾಯಿತು. ಏಕೆಂದರೆ, ಶಿಷ್ಯರು ಮಾತ್ರ ಆ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು.
23 ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.
24 ಹೀಗಿರಲಾಗಿ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ಅರಿತು ತಾವೇ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
25 ಮತ್ತು ಸಮುದ್ರದ ಆಚೆಕಡೆಯಲ್ಲಿ ಆತನನ್ನು ಕಂಡು “ಗುರುವೇ, ಯಾವಾಗ ಇಲ್ಲಿಗೆ ಬಂದಿ?” ಎಂದು ಕೇಳಿದರು.
26 ಯೇಸು ಅವರಿಗೆ “ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.
27 ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು.
ಯೋಹಾ 6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019