Text copied!
Bibles in Kannada

ಯೋಹಾ 6:2-14 in Kannada

Help us?

ಯೋಹಾ 6:2-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಬಹು ಜನರು ಆತನು ರೋಗಿಗಳಲ್ಲಿ ಮಾಡಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ, ಜನರ ದೊಡ್ಡಗುಂಪು ಆತನನ್ನು ಹಿಂಬಾಲಿಸುತ್ತಿತ್ತು.
3 ಆದರೆ ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕುಳಿತುಕೊಂಡನು.
4 ಆಗ ಯೆಹೂದ್ಯರ ಪಸ್ಕದ ಹಬ್ಬವು ಹತ್ತಿರವಾಗಿತ್ತು.
5 ಹೀಗಿರಲಾಗಿ ಯೇಸು ಕಣ್ಣೆತ್ತಿ ನೋಡಿದಾಗ ಜನರ ದೊಡ್ಡಗುಂಪು ತನ್ನ ಕಡೆಗೆ ಬರುವುದನ್ನು ನೋಡಿ “ಇವರ ಊಟಕ್ಕೆ ನಾವು ಎಲ್ಲಿಂದ ರೊಟ್ಟಿ ಕೊಂಡು ತರೋಣ?” ಎಂದು ಫಿಲಿಪ್ಪನನ್ನು ಕೇಳಿದನು.
6 ತಾನು ಮಾಡಲಿದ್ದಕಾರ್ಯ ಯೇಸುವಿಗೆ ತಿಳಿದಿದ್ದರೂ, ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ, ಆ ಪ್ರಶ್ನೆಯನ್ನು ಕೇಳಿದನು.
7 ಅದಕ್ಕೆ ಫಿಲಿಪ್ಪನು, “ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು ದಿನಾರಿ ಮೌಲ್ಯದ ರೊಟ್ಟಿಯಾದರೂ ಅವರಿಗೆ ಸಾಲುವುದಿಲ್ಲ” ಎಂದನು.
8 ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಆತನಿಗೆ;
9 “ಇಲ್ಲಿ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ, ಎರಡು ಮೀನುಗಳೂ ಇವೆ. ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು?” ಎಂದು ಹೇಳಲು,
10 ಯೇಸು “ಆ ಜನರನ್ನು ಊಟಕ್ಕೆ ಕುಳ್ಳಿರಿಸಿರಿ” ಎಂದನು. ಆ ಸ್ಥಳದಲ್ಲಿ ಬಹಳ ಹುಲ್ಲು ಬೆಳೆದಿತ್ತು. ಜನರು ಹುಲ್ಲಿನ ಮೇಲೆ ಕುಳಿತುಕೊಂಡರು. ಗಂಡಸರ ಸಂಖ್ಯೆ ಹೆಚ್ಚುಕಡಿಮೆ ಐದು ಸಾವಿರವಿತ್ತು.
11 ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು.
12 ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಮಿಕ್ಕ ತುಂಡುಗಳನ್ನು ಕೂಡಿಸಿರಿ, ಇದರಲ್ಲಿ ಯಾವುದೂ ವ್ಯರ್ಥವಾಗಬಾರದು” ಎಂದು ಹೇಳಿದನು.
13 ಅವರು ಆ ಐದು ಜವೆಗೋದಿಯ ರೊಟ್ಟಿಗಳಲ್ಲಿ ಜನರು ತಿಂದು ಮಿಕ್ಕ ತುಂಡುಗಳನ್ನು ಕೂಡಿಸಿ, ಹನ್ನೆರಡು ಪುಟ್ಟಿಗಳಿಗೆ ತುಂಬಿಸಿದರು.
14 ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ, “ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಈತನೇ” ಎಂದು ಹೇಳಿಕೊಂಡರು.
ಯೋಹಾ 6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019