Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 6

ಯೋಹಾ 6:2-7

Help us?
Click on verse(s) to share them!
2ಬಹು ಜನರು ಆತನು ರೋಗಿಗಳಲ್ಲಿ ಮಾಡಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ, ಜನರ ದೊಡ್ಡಗುಂಪು ಆತನನ್ನು ಹಿಂಬಾಲಿಸುತ್ತಿತ್ತು.
3ಆದರೆ ಯೇಸು ಬೆಟ್ಟವನ್ನೇರಿ ಅಲ್ಲಿ ತನ್ನ ಶಿಷ್ಯರೊಂದಿಗೆ ಕುಳಿತುಕೊಂಡನು.
4ಆಗ ಯೆಹೂದ್ಯರ ಪಸ್ಕದ ಹಬ್ಬವು ಹತ್ತಿರವಾಗಿತ್ತು.
5ಹೀಗಿರಲಾಗಿ ಯೇಸು ಕಣ್ಣೆತ್ತಿ ನೋಡಿದಾಗ ಜನರ ದೊಡ್ಡಗುಂಪು ತನ್ನ ಕಡೆಗೆ ಬರುವುದನ್ನು ನೋಡಿ “ಇವರ ಊಟಕ್ಕೆ ನಾವು ಎಲ್ಲಿಂದ ರೊಟ್ಟಿ ಕೊಂಡು ತರೋಣ?” ಎಂದು ಫಿಲಿಪ್ಪನನ್ನು ಕೇಳಿದನು.
6ತಾನು ಮಾಡಲಿದ್ದಕಾರ್ಯ ಯೇಸುವಿಗೆ ತಿಳಿದಿದ್ದರೂ, ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ, ಆ ಪ್ರಶ್ನೆಯನ್ನು ಕೇಳಿದನು.
7ಅದಕ್ಕೆ ಫಿಲಿಪ್ಪನು, “ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು ದಿನಾರಿ ಮೌಲ್ಯದ ರೊಟ್ಟಿಯಾದರೂ ಅವರಿಗೆ ಸಾಲುವುದಿಲ್ಲ” ಎಂದನು.

Read ಯೋಹಾ 6ಯೋಹಾ 6
Compare ಯೋಹಾ 6:2-7ಯೋಹಾ 6:2-7