29ಯೇಸುವು, “ದೇವರ ಕ್ರಿಯೆ ಯಾವುದೆಂದರೆ, ಆತನು ಕಳುಹಿಸಿಕೊಟ್ಟಾತನನ್ನು ನೀವು ನಂಬುವುದೇ” ಎಂದನು.
30ಅವರು ಆತನನ್ನು “ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕಕಾರ್ಯ ಮಾಡುತ್ತೀ? ನೀನು ಏನುಮಾಡುತ್ತಿ?
31ನಮ್ಮ ಪೂರ್ವಿಕರು ಅರಣ್ಯದಲ್ಲಿ ಮನ್ನಾ ತಿಂದರು. ‘ಪರಲೋಕದಿಂದ ರೊಟ್ಟಿಯನ್ನು ಅವರಿಗೆ ತಿನ್ನುವುದಕ್ಕೆ ಕೊಟ್ಟನು’ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲಾ” ಎಂದು ಕೇಳಿದಾಗ,
32ಯೇಸು ಅವರಿಗೆ “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ, ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.
33ದೇವರು ಕೊಡುವ ಆ ರೊಟ್ಟಿ ಯಾವುದೆಂದರೆ, ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದ್ದೇ” ಎಂದು ಹೇಳಿದನು.
34ಆಗ ಅವರು “ಆಯ್ಯಾ, ಆ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು” ಎಂದರು.
35ಯೇಸು ಅವರಿಗೆ “ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂಬಾಯಾರಿಕೆಯಾಗುವುದಿಲ್ಲ.
36ಆದರೆ ನೀವು ನನ್ನನ್ನು ನೋಡಿದ್ದರೂ ನಂಬಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.