Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 6

ಯೋಹಾ 6:48-71

Help us?
Click on verse(s) to share them!
48ನಾನೇ ಜೀವದ ರೊಟ್ಟಿ
49ನಿಮ್ಮ ಪೂರ್ವಿಕರು ಅಡವಿಯಲ್ಲಿ ಮನ್ನಾ ತಿಂದರೂ ಸತ್ತು ಹೋದರು.
50ಪರಲೋಕದಿಂದ ಇಳಿದು ಬರುವಂಥ ಆ ರೊಟ್ಟಿ, ಎಂಥದೆಂದರೆ ಅದನ್ನು ತಿಂದವನು ಎಂದಿಗೂ ಸಾಯುವುದಿಲ್ಲ.
51ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು.
52ಆಗ ಯೆಹೂದ್ಯರು, “ಈ ಮನುಷ್ಯನು ತನ್ನ ದೇಹವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೇ?” ಎಂದು ತಮ್ಮತಮ್ಮೊಳಗೆ ವಾಗ್ವಾದಮಾಡಲು ಪ್ರಾರಂಭಿಸಿದರು.
53ಅದಕ್ಕೆ ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ.
54ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿಯುವನೋ ಅವನು ನಿತ್ಯ ಜೀವವನ್ನು ಹೊಂದುವನು. ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.
55ಏಕೆಂದರೆ ನನ್ನ ದೇಹವೇ ನಿಜವಾದ ಆಹಾರವೂ ಮತ್ತು ನನ್ನ ರಕ್ತವೇ ನಿಜವಾದ ಪಾನವೂ ಆಗಿದೆ.
56ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ.
57ಜೀವವುಳ್ಳ ತಂದೆಯು ನನ್ನನ್ನು ಅಧಿಕಾರದೊಂದಿಗೆ ಕಳುಹಿಸಿಕೊಟ್ಟಿದ್ದಾನೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುತ್ತೇನೆ, ಅದರಂತೆ ನನ್ನನ್ನು ತಿನ್ನುವವನೂ ನನ್ನ ನಿಮಿತ್ತವಾಗಿಯೇ ಜೀವಿಸುವನು.
58ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೇ, ನಿಮ್ಮ ಪೂರ್ವಿಕರು ಮನ್ನಾವನ್ನು ತಿಂದರೂ ಸತ್ತರು, ಆದರೆ, ಈ ರೊಟ್ಟಿಯನ್ನು ತಿನ್ನುವವನು ಸದಾಕಾಲಕ್ಕೂ ಜೀವಿಸುವನು” ಎಂದು ಹೇಳಿದನು.
59ಈ ವಿಷಯಗಳನ್ನು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶ ಮಾಡುವಾಗ ಹೇಳಿದನು.
60ಯೇಸುವಿನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ “ಇದು ಕಠಿಣವಾದ ಮಾತು, ಇದನ್ನು ಪಾಲಿಸುವವರು ಯಾರು?” ಎಂದು ಮಾತನಾಡಿಕೊಂಡರು.
61ತನ್ನ ಶಿಷ್ಯರು ಇದಕ್ಕೆ ಗೊಣಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ “ಈ ಮಾತಿನಿಂದ ನಿಮಗೆ ಬೇಸರವಾಯಿತೋ?
62ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?
63ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.
64ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ” ನಂಬದವರು ಯಾರೆಂದೂ ಹಾಗೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.
65ಆತನು “ತಂದೆಯು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ,” ಎಂದನು.
66ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು.
67ಆದಕಾರಣ ಯೇಸು ಇದನ್ನು ನೋಡಿ, ತನ್ನ ಹನ್ನೆರಡು ಮಂದಿ ಶಿಷ್ಯಂದಿರಿಗೆ “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಿದ್ದಕ್ಕೆ,
68ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.
69ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.
70ಅದಕ್ಕೆ ಯೇಸು “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೇ? ಆದರೂ ನಿಮ್ಮಲ್ಲಿಯೂ ಒಬ್ಬನು ಸೈತಾನನಿದ್ದಾನೆ” ಎಂದನು.
71ಈ ಮಾತು, ಆತನು ಸೀಮೋನ್ ಇಸ್ಕರಿಯೋತನ ಮಗನಾದ ಯೂದನ ವಿಷಯವಾಗಿ ಹೇಳಿದನು, ಏಕೆಂದರೆ, ಅವನು ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದು, ಅವನೇ ಆತನನ್ನು ಹಿಡಿದು ಕೊಡುವುದಕ್ಕಿದ್ದನು.

Read ಯೋಹಾ 6ಯೋಹಾ 6
Compare ಯೋಹಾ 6:48-71ಯೋಹಾ 6:48-71