Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 6

ಯೋಹಾ 6:5-12

Help us?
Click on verse(s) to share them!
5ಹೀಗಿರಲಾಗಿ ಯೇಸು ಕಣ್ಣೆತ್ತಿ ನೋಡಿದಾಗ ಜನರ ದೊಡ್ಡಗುಂಪು ತನ್ನ ಕಡೆಗೆ ಬರುವುದನ್ನು ನೋಡಿ “ಇವರ ಊಟಕ್ಕೆ ನಾವು ಎಲ್ಲಿಂದ ರೊಟ್ಟಿ ಕೊಂಡು ತರೋಣ?” ಎಂದು ಫಿಲಿಪ್ಪನನ್ನು ಕೇಳಿದನು.
6ತಾನು ಮಾಡಲಿದ್ದಕಾರ್ಯ ಯೇಸುವಿಗೆ ತಿಳಿದಿದ್ದರೂ, ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ, ಆ ಪ್ರಶ್ನೆಯನ್ನು ಕೇಳಿದನು.
7ಅದಕ್ಕೆ ಫಿಲಿಪ್ಪನು, “ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು ದಿನಾರಿ ಮೌಲ್ಯದ ರೊಟ್ಟಿಯಾದರೂ ಅವರಿಗೆ ಸಾಲುವುದಿಲ್ಲ” ಎಂದನು.
8ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಆತನಿಗೆ;
9“ಇಲ್ಲಿ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ, ಎರಡು ಮೀನುಗಳೂ ಇವೆ. ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು?” ಎಂದು ಹೇಳಲು,
10ಯೇಸು “ಆ ಜನರನ್ನು ಊಟಕ್ಕೆ ಕುಳ್ಳಿರಿಸಿರಿ” ಎಂದನು. ಆ ಸ್ಥಳದಲ್ಲಿ ಬಹಳ ಹುಲ್ಲು ಬೆಳೆದಿತ್ತು. ಜನರು ಹುಲ್ಲಿನ ಮೇಲೆ ಕುಳಿತುಕೊಂಡರು. ಗಂಡಸರ ಸಂಖ್ಯೆ ಹೆಚ್ಚುಕಡಿಮೆ ಐದು ಸಾವಿರವಿತ್ತು.
11ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು.
12ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಮಿಕ್ಕ ತುಂಡುಗಳನ್ನು ಕೂಡಿಸಿರಿ, ಇದರಲ್ಲಿ ಯಾವುದೂ ವ್ಯರ್ಥವಾಗಬಾರದು” ಎಂದು ಹೇಳಿದನು.

Read ಯೋಹಾ 6ಯೋಹಾ 6
Compare ಯೋಹಾ 6:5-12ಯೋಹಾ 6:5-12