Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 6

ಯೋಹಾ 6:9-35

Help us?
Click on verse(s) to share them!
9“ಇಲ್ಲಿ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ, ಎರಡು ಮೀನುಗಳೂ ಇವೆ. ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು?” ಎಂದು ಹೇಳಲು,
10ಯೇಸು “ಆ ಜನರನ್ನು ಊಟಕ್ಕೆ ಕುಳ್ಳಿರಿಸಿರಿ” ಎಂದನು. ಆ ಸ್ಥಳದಲ್ಲಿ ಬಹಳ ಹುಲ್ಲು ಬೆಳೆದಿತ್ತು. ಜನರು ಹುಲ್ಲಿನ ಮೇಲೆ ಕುಳಿತುಕೊಂಡರು. ಗಂಡಸರ ಸಂಖ್ಯೆ ಹೆಚ್ಚುಕಡಿಮೆ ಐದು ಸಾವಿರವಿತ್ತು.
11ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು.
12ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಮಿಕ್ಕ ತುಂಡುಗಳನ್ನು ಕೂಡಿಸಿರಿ, ಇದರಲ್ಲಿ ಯಾವುದೂ ವ್ಯರ್ಥವಾಗಬಾರದು” ಎಂದು ಹೇಳಿದನು.
13ಅವರು ಆ ಐದು ಜವೆಗೋದಿಯ ರೊಟ್ಟಿಗಳಲ್ಲಿ ಜನರು ತಿಂದು ಮಿಕ್ಕ ತುಂಡುಗಳನ್ನು ಕೂಡಿಸಿ, ಹನ್ನೆರಡು ಪುಟ್ಟಿಗಳಿಗೆ ತುಂಬಿಸಿದರು.
14ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ, “ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಈತನೇ” ಎಂದು ಹೇಳಿಕೊಂಡರು.
15ಆಗ ಯೇಸು, ಅವರು ಬಂದು ತನ್ನನ್ನು ಹಿಡಿದುಕೊಂಡು ಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ತಿಳಿದುಕೊಂಡು ಪುನಃ ತಾನೊಬ್ಬನೇ ಬೆಟ್ಟಕ್ಕೆ ಹೋಗಿಬಿಟ್ಟನು.
16ಸಂಜೆಯಾದಾಗ ಆತನ ಶಿಷ್ಯರು ಸಮುದ್ರದ ದಡಕ್ಕೆ ಬಂದು,
17ದೋಣಿಯನ್ನು ಹತ್ತಿ, ಸಮುದ್ರ ಮಾರ್ಗವಾಗಿ ಕಪೆರ್ನೌಮಿನ ಕಡೆಗೆ ಹೊರಟರು. ಆಗಲೇ ಕತ್ತಲಾಗಿತ್ತು ಆದರೆ ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.
18ಬಿರುಗಾಳಿ ಬೀಸುತ್ತಿದ್ದುದರಿಂದ ಸಮುದ್ರವು ಅಲ್ಲೋಲಕಲ್ಲೋಲವಾಯಿತು.
19ಹೀಗಿರಲಾಗಿ ಅವರು ಹುಟ್ಟು ಹಾಕುತ್ತಾ ಸುಮಾರು ಒಂದು ಹರದಾರಿ ದೂರ ಹೋದ ಬಳಿಕ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವುದನ್ನು ನೋಡಿ ಭಯಪಟ್ಟರು.
20ಆದರೆ ಯೇಸು ಅವರಿಗೆ, “ಭಯಪಡಬೇಡಿರಿ, ನಾನೇ!” ಎಂದನು.
21ಆಗ ಆತನನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಆ ಕ್ಷಣವೇ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಮುಟ್ಟಿತು.
22ಮರುದಿನ ಸಮುದ್ರದ ಆಚೇಕಡೆಯಲ್ಲಿ ನಿಂತಿದ್ದ ಜನರು ಅಲ್ಲಿ ಒಂದೇ ದೋಣಿ ಲಭ್ಯವಿದೆ ಇದೆ, ಮತ್ತು ಯೇಸು ತನ್ನ ಶಿಷ್ಯರ ಸಂಗಡ ಆ ದೋಣಿಯಲ್ಲಿ ಹತ್ತಲಿಲ್ಲವೆಂದೂ ಅವರಿಗೆ ಅರಿವಾಯಿತು. ಏಕೆಂದರೆ, ಶಿಷ್ಯರು ಮಾತ್ರ ಆ ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು.
23ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.
24ಹೀಗಿರಲಾಗಿ ಯೇಸು ಮತ್ತು ಆತನ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ಅರಿತು ತಾವೇ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.
25ಮತ್ತು ಸಮುದ್ರದ ಆಚೆಕಡೆಯಲ್ಲಿ ಆತನನ್ನು ಕಂಡು “ಗುರುವೇ, ಯಾವಾಗ ಇಲ್ಲಿಗೆ ಬಂದಿ?” ಎಂದು ಕೇಳಿದರು.
26ಯೇಸು ಅವರಿಗೆ “ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.
27ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು.
28ಅವರು ಆತನಿಗೆ “ದೇವರ ಕ್ರಿಯೆಗಳನ್ನು ನಾವು ಮಾಡಬೇಕಾದರೆ ಏನು ಮಾಡಬೇಕೆಂದು” ಕೇಳಿದ್ದಕ್ಕೆ,
29ಯೇಸುವು, “ದೇವರ ಕ್ರಿಯೆ ಯಾವುದೆಂದರೆ, ಆತನು ಕಳುಹಿಸಿಕೊಟ್ಟಾತನನ್ನು ನೀವು ನಂಬುವುದೇ” ಎಂದನು.
30ಅವರು ಆತನನ್ನು “ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕಕಾರ್ಯ ಮಾಡುತ್ತೀ? ನೀನು ಏನುಮಾಡುತ್ತಿ?
31ನಮ್ಮ ಪೂರ್ವಿಕರು ಅರಣ್ಯದಲ್ಲಿ ಮನ್ನಾ ತಿಂದರು. ‘ಪರಲೋಕದಿಂದ ರೊಟ್ಟಿಯನ್ನು ಅವರಿಗೆ ತಿನ್ನುವುದಕ್ಕೆ ಕೊಟ್ಟನು’ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲಾ” ಎಂದು ಕೇಳಿದಾಗ,
32ಯೇಸು ಅವರಿಗೆ “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ, ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.
33ದೇವರು ಕೊಡುವ ಆ ರೊಟ್ಟಿ ಯಾವುದೆಂದರೆ, ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದ್ದೇ” ಎಂದು ಹೇಳಿದನು.
34ಆಗ ಅವರು “ಆಯ್ಯಾ, ಆ ರೊಟ್ಟಿಯನ್ನು ನಮಗೆ ಯಾವಾಗಲೂ ಕೊಡು” ಎಂದರು.
35ಯೇಸು ಅವರಿಗೆ “ನಾನೇ ಜೀವದ ರೊಟ್ಟಿ ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವನಿಗೆ ಎಂದಿಗೂಬಾಯಾರಿಕೆಯಾಗುವುದಿಲ್ಲ.

Read ಯೋಹಾ 6ಯೋಹಾ 6
Compare ಯೋಹಾ 6:9-35ಯೋಹಾ 6:9-35