Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 7

ಯೋಹಾ 7:15-23

Help us?
Click on verse(s) to share them!
15ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು, “ಶಾಸ್ತ್ರಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವುದಾದರೂ ಹೇಗೆ?” ಎಂದರು.
16ಅದಕ್ಕೆ ಯೇಸು “ನಾನು ಹೇಳುವ ಬೋಧನೆಯು ನನ್ನದಲ್ಲ. ನನ್ನನ್ನು ಕಳುಹಿಸಿದಾತನದೇ.
17ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.
18ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.
19ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?” ಎಂದು ಕೇಳಿದನು.
20ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಯಾರು ಹುಡುಕುತ್ತಿದ್ದಾರೆ?” ಎಂದರು.
21ಯೇಸು ಅವರಿಗೆ “ನಾನುಒಂದು ಸೂಚಕ ಕಾರ್ಯವನ್ನು ಮಾಡಿದೆನು, ಅದಕ್ಕೆ ನೀವೆಲ್ಲರೂ ಬೆರಗಾಗಿದ್ದೀರಿ.
22ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ,ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲಿಯೂ ಮಾಡುತ್ತೀರಿ.
23ಮೋಶೆಯ ಧರ್ಮಶಾಸ್ತ್ರವನ್ನು ಮೀರಬಾರದೆಂದು ಒಬ್ಬನು ಸಬ್ಬತ್ ದಿನದಲ್ಲಿ ಸುನ್ನತಿಯನ್ನು ಮಾಡಿಸಿಕೊಳ್ಳುವುದಾದರೆ, ನಾನು ಸಬ್ಬತ್ ದಿನದಲ್ಲಿ ಒಬ್ಬ ಮನುಷ್ಯನನ್ನು ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?

Read ಯೋಹಾ 7ಯೋಹಾ 7
Compare ಯೋಹಾ 7:15-23ಯೋಹಾ 7:15-23