Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 7

ಯೋಹಾ 7:2-16

Help us?
Click on verse(s) to share them!
2ಆಗ ಯೆಹೂದ್ಯರ ಗುಡಾರಗಳ ಹಬ್ಬವು ಸಮೀಪವಾಗಿತ್ತು,
3ಆದುದರಿಂದ ಆತನ ಸಹೋದರರು ಆತನಿಗೆ “ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರೂ ಸಹ ನೋಡುವಂತೆ, ಇಲ್ಲಿಂದ ಹೊರಟು, ಯೂದಾಯಕ್ಕೆ ಹೋಗು.
4ಪ್ರಸಿದ್ಧಿಗೆ ಬರಬೇಕೆಂದಿರುವವನು ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದರಿಂದ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ” ಎಂದು ಹೇಳಿದರು.
5ಏಕೆಂದರೆ ಆತನ ಸಹೋದರರು ಸಹ ಆತನನ್ನು ನಂಬಲಿಲ್ಲ.
6ಅದಕ್ಕೆ ಯೇಸು ಅವರಿಗೆ, “ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
7ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.
8ನೀವು ಈ ಹಬ್ಬಕ್ಕೆ ಹೋಗಿರಿ, ನನ್ನ ಸಮಯವು ಇನ್ನೂ ಬಾರದಿರುವುದರಿಂದ ನಾನು ಈ ಹಬ್ಬಕ್ಕೆ ಈಗ ಹೋಗುವುದಿಲ್ಲ” ಎಂದು ಹೇಳಿದನು.
9ಇದನ್ನು ಹೇಳಿದ ಮೇಲೆ ಆತನು ಗಲಿಲಾಯದಲ್ಲಿಯೇ ಉಳಿದುಕೊಂಡನು.
10ಆದರೆ ಆತನ ಸಹೋದರರು ಹೋದ ಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ, ರಹಸ್ಯವಾಗಿ ಹೋದನು.
11ಆ ಹಬ್ಬದಲ್ಲಿ ಯೆಹೂದ್ಯರು, “ಆ ಮನುಷ್ಯನು ಎಲ್ಲಿ?” ಎಂದು ಹುಡುಕುತ್ತಿದ್ದರು.
12ಜನರು ಗುಂಪುಗಳಲ್ಲಿ ಆತನ ವಿಷಯವಾಗಿ ಗೊಣಗುಟ್ಟುತಿದ್ದರು. ಕೆಲವರು “ಆತನು ಒಳ್ಳೆಯ ಮನುಷ್ಯನು” ಎಂದರು, ಇನ್ನು ಕೆಲವರು “ಇಲ್ಲ ಆತನು ಜನರಿಗೆ ಮೋಸ ಮಾಡುತ್ತಾನೆ” ಎಂದರು.
13ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಬಹಿರಂಗವಾಗಿ ಮಾತನಾಡಲಿಲ್ಲ.
14ಹಬ್ಬದ ಮಧ್ಯಕಾಲದಲ್ಲಿ ಯೇಸು ದೇವಾಲಯಕ್ಕೆ ಹೋಗಿ ಬೋಧಿಸತೊಡಗಿದನು.
15ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು, “ಶಾಸ್ತ್ರಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವುದಾದರೂ ಹೇಗೆ?” ಎಂದರು.
16ಅದಕ್ಕೆ ಯೇಸು “ನಾನು ಹೇಳುವ ಬೋಧನೆಯು ನನ್ನದಲ್ಲ. ನನ್ನನ್ನು ಕಳುಹಿಸಿದಾತನದೇ.

Read ಯೋಹಾ 7ಯೋಹಾ 7
Compare ಯೋಹಾ 7:2-16ಯೋಹಾ 7:2-16