Text copied!
Bibles in Kannada

ಯೋಹಾ 7:22-33 in Kannada

Help us?

ಯೋಹಾ 7:22-33 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮೋಶೆಯು ನಿಮಗೆ ಸುನ್ನತಿಯೆಂಬ ನಿಯಮವನ್ನು ನೇಮಿಸಿದನು, (ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವುದಿಲ್ಲ,ಮೂಲಪುರುಷರ ಕಾಲದಿಂದ ಬಂದದ್ದು) ಮತ್ತು ಮನುಷ್ಯನಿಗೆ ಸುನ್ನತಿಯನ್ನು ಸಬ್ಬತ್ ದಿನದಲ್ಲಿಯೂ ಮಾಡುತ್ತೀರಿ.
23 ಮೋಶೆಯ ಧರ್ಮಶಾಸ್ತ್ರವನ್ನು ಮೀರಬಾರದೆಂದು ಒಬ್ಬನು ಸಬ್ಬತ್ ದಿನದಲ್ಲಿ ಸುನ್ನತಿಯನ್ನು ಮಾಡಿಸಿಕೊಳ್ಳುವುದಾದರೆ, ನಾನು ಸಬ್ಬತ್ ದಿನದಲ್ಲಿ ಒಬ್ಬ ಮನುಷ್ಯನನ್ನು ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?
24 ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ” ಎಂದನು.
25 ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು “ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ?
26 ನೋಡಿರಿ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ ಮತ್ತು ಅವರು ಆತನಿಗೆ ಏನೂ ಹೇಳುತ್ತಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತನೆಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ?
27 ಆದರೆ ಇವನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು, ಕ್ರಿಸ್ತನು ಬರುವಾಗ ಆತನು ಎಲ್ಲಿಂದ ಬಂದವನೆಂದು ಒಬ್ಬರಿಗೂ ತಿಳಿಯುವುದಿಲ್ಲವೆಂದು ಮಾತನಾಡಿಕೊಳ್ಳುತ್ತಿದ್ದರು.”
28 ಯೇಸುವು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ, ಆದರೂ ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದಾತನು ಸತ್ಯವಂತನು. ನೀವು ಆತನನ್ನು ಅರಿತವರಲ್ಲ.
29 ಆದರೆ ನಾನು ಆತನನ್ನು ಬಲ್ಲೆನು ಏಕೆಂದರೆ, ನಾನು ಆತನ ಕಡೆಯಿಂದ ಬಂದವನು ಮತ್ತು ಆತನೇ ನನ್ನನ್ನು ಕಳುಹಿಸಿದನು” ಎಂದು ಕೂಗಿ ಹೇಳಿದನು.
30 ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.
31 ಜನರಲ್ಲಿ ಅನೇಕರು ಆತನನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕ ಕಾರ್ಯಗಳನ್ನು ಮಾಡುವನೇನೋ?” ಎಂದು ಹೇಳಿದರು.
32 ಜನರು ಆತನ ವಿಷಯವಾಗಿ ಗೊಣಗುಟ್ಟಿದ ಮಾತುಗಳನ್ನು ಫರಿಸಾಯರು ಕೇಳಿಸಿಕೊಂಡು ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಬಂಧಿಸಲು ದೇವಾಲಯದ ಕಾವಲುಗಾರರನ್ನು ಕಳುಹಿಸಿದರು.
33 ಆಗ ಯೇಸು ಅವರಿಗೆ “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.
ಯೋಹಾ 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019