Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 7

ಯೋಹಾ 7:32-44

Help us?
Click on verse(s) to share them!
32ಜನರು ಆತನ ವಿಷಯವಾಗಿ ಗೊಣಗುಟ್ಟಿದ ಮಾತುಗಳನ್ನು ಫರಿಸಾಯರು ಕೇಳಿಸಿಕೊಂಡು ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಬಂಧಿಸಲು ದೇವಾಲಯದ ಕಾವಲುಗಾರರನ್ನು ಕಳುಹಿಸಿದರು.
33ಆಗ ಯೇಸು ಅವರಿಗೆ “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.
34ನೀವು ನನ್ನನ್ನು ಹುಡುಕುವಿರಿ, ಆದರೆ ಕಂಡುಕೊಳ್ಳದೆ ಹೋಗುವಿರಿ. ನಾನು ಇರುವಲ್ಲಿಗೆ ನೀವು ಬರಲಾರಿರಿ” ಎಂದನು.
35ಅದಕ್ಕೆ ಯೆಹೂದ್ಯರು “ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿದ್ದಾನೆ? ಗ್ರೀಕರ ನಡುವೆ ಚದುರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಬೋಧನೆ ಮಾಡಬೇಕೆಂದಿರುವನೋ?
36‘ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ ಮತ್ತು ನಾನು ಇರುವಲ್ಲಿಗೆ ನೀವು ಬರಲಾರಿರಿ’ ಎಂದು ಹೇಳಿದ ಮಾತಿನ ಅರ್ಥ ಏನಾಗಿರಬಹುದು?” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
37ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು “ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
38ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು” ಎಂದು ಕೂಗಿ ಹೇಳಿದನು.
39ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.
40ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿದಾಗ “ನಿಜವಾಗಿಯೂ ಈತನು ಪ್ರವಾದಿಯಾಗಿದ್ದಾನೆ” ಎಂದರು.
41ಕೆಲವರು, “ಈತನು ಕ್ರಿಸ್ತನು” ಎಂದರು, ಆದರೆ ಇನ್ನೂ ಕೆಲವರು “ಕ್ರಿಸ್ತನು ಗಲಿಲಾಯದಿಂದ ಬರುವುದುಂಟೆ?
42ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು.
43ಹೀಗೆ ಆತನ ನಿಮಿತ್ತವಾಗಿ ಜನರಲ್ಲಿ ಭೇದ ಉಂಟಾಯಿತು.
44ಅವರಲ್ಲಿ ಕೆಲವರು ಆತನನ್ನು ಬಂಧಿಸಬೇಕೆಂದಿದ್ದರೂ ಆದರೆ ಯಾರು ಆತನ ಮೇಲೆ ಕೈ ಹಾಕಲಿಲ್ಲ.

Read ಯೋಹಾ 7ಯೋಹಾ 7
Compare ಯೋಹಾ 7:32-44ಯೋಹಾ 7:32-44