Text copied!
Bibles in Kannada

ಯೋಹಾ 7:38-42 in Kannada

Help us?

ಯೋಹಾ 7:38-42 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ನನ್ನಲ್ಲಿ ಯಾವನು ನಂಬಿಕೆಯಿಡುವನೋ ಅವನೊಳಗಿನಿಂದ ಜೀವಕರವಾದ ನೀರಿನ ಬುಗ್ಗೆಗಳು ಹರಿಯುವವು” ಎಂದು ಕೂಗಿ ಹೇಳಿದನು.
39 ಆದರೆ ಯೇಸು ತನ್ನನ್ನು ನಂಬುವವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೀಗೆ ಹೇಳಿದನು. ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ ಕಾರಣ ಪವಿತ್ರಾತ್ಮವರವು ಇನ್ನೂ ಕೊಡಲ್ಪಟ್ಟಿರಲಿಲ್ಲ.
40 ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿದಾಗ “ನಿಜವಾಗಿಯೂ ಈತನು ಪ್ರವಾದಿಯಾಗಿದ್ದಾನೆ” ಎಂದರು.
41 ಕೆಲವರು, “ಈತನು ಕ್ರಿಸ್ತನು” ಎಂದರು, ಆದರೆ ಇನ್ನೂ ಕೆಲವರು “ಕ್ರಿಸ್ತನು ಗಲಿಲಾಯದಿಂದ ಬರುವುದುಂಟೆ?
42 ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು.
ಯೋಹಾ 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019