Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 7

ಯೋಹಾ 7:40-51

Help us?
Click on verse(s) to share them!
40ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿದಾಗ “ನಿಜವಾಗಿಯೂ ಈತನು ಪ್ರವಾದಿಯಾಗಿದ್ದಾನೆ” ಎಂದರು.
41ಕೆಲವರು, “ಈತನು ಕ್ರಿಸ್ತನು” ಎಂದರು, ಆದರೆ ಇನ್ನೂ ಕೆಲವರು “ಕ್ರಿಸ್ತನು ಗಲಿಲಾಯದಿಂದ ಬರುವುದುಂಟೆ?
42ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು.
43ಹೀಗೆ ಆತನ ನಿಮಿತ್ತವಾಗಿ ಜನರಲ್ಲಿ ಭೇದ ಉಂಟಾಯಿತು.
44ಅವರಲ್ಲಿ ಕೆಲವರು ಆತನನ್ನು ಬಂಧಿಸಬೇಕೆಂದಿದ್ದರೂ ಆದರೆ ಯಾರು ಆತನ ಮೇಲೆ ಕೈ ಹಾಕಲಿಲ್ಲ.
45ಬಳಿಕ ಆ ದೇವಾಲಯದ ಕಾವಲುಗಾರರು, ಮುಖ್ಯಯಾಜಕರ ಮತ್ತು ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಕರೆತರಲಿಲ್ಲ?” ಎಂದು ಅವರನ್ನು ಕೇಳಿದ್ದಕ್ಕೆ,
46ಕಾವಲುಗಾರರು “ಈ ಮನುಷ್ಯನು ಮಾತನಾಡುವ ರೀತಿಯಲ್ಲಿ ಯಾರೂ ಎಂದೂ ಮಾತನಾಡಿದ್ದಿಲ್ಲ” ಎಂದು ಉತ್ತರ ಕೊಟ್ಟರು.
47ಆಗ ಫರಿಸಾಯರು ಅವರಿಗೆ “ನೀವೂ ಸಹ ಆತನ ಮಾತಿಗೆ ಮರುಳಾದೀರಾ?
48ಹಿರೀಸಭೆಯವರಲ್ಲಾಗಲಿ ಫರಿಸಾಯರಲ್ಲಾಗಲಿ ಯಾರಾದರೂ ಅವನನ್ನು ನಂಬಿದ್ದಾರೋ?
49ಧರ್ಮಶಾಸ್ತ್ರವನ್ನು ಅರಿಯದ ಈ ಹಿಂಡು ಶಾಪಗ್ರಸ್ತರೇ” ಎಂದು ಹೇಳಿದರು.
50ಮೊದಲು ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಅವರಲ್ಲಿ ಒಬ್ಬನಾಗಿದ್ದನು,
51ಅವನು ಅವರಿಗೆ “ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ಅವನ ವಿಷಯವಾಗಿ ಖಂಡನೆ ಮಾಡುವುದುಂಟೇ?” ಎಂದು ಹೇಳಿದ್ದಕ್ಕೆ,

Read ಯೋಹಾ 7ಯೋಹಾ 7
Compare ಯೋಹಾ 7:40-51ಯೋಹಾ 7:40-51