Text copied!
Bibles in Kannada

ಯೋಹಾ 7:9-20 in Kannada

Help us?

ಯೋಹಾ 7:9-20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದನ್ನು ಹೇಳಿದ ಮೇಲೆ ಆತನು ಗಲಿಲಾಯದಲ್ಲಿಯೇ ಉಳಿದುಕೊಂಡನು.
10 ಆದರೆ ಆತನ ಸಹೋದರರು ಹೋದ ಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ, ರಹಸ್ಯವಾಗಿ ಹೋದನು.
11 ಆ ಹಬ್ಬದಲ್ಲಿ ಯೆಹೂದ್ಯರು, “ಆ ಮನುಷ್ಯನು ಎಲ್ಲಿ?” ಎಂದು ಹುಡುಕುತ್ತಿದ್ದರು.
12 ಜನರು ಗುಂಪುಗಳಲ್ಲಿ ಆತನ ವಿಷಯವಾಗಿ ಗೊಣಗುಟ್ಟುತಿದ್ದರು. ಕೆಲವರು “ಆತನು ಒಳ್ಳೆಯ ಮನುಷ್ಯನು” ಎಂದರು, ಇನ್ನು ಕೆಲವರು “ಇಲ್ಲ ಆತನು ಜನರಿಗೆ ಮೋಸ ಮಾಡುತ್ತಾನೆ” ಎಂದರು.
13 ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಬಹಿರಂಗವಾಗಿ ಮಾತನಾಡಲಿಲ್ಲ.
14 ಹಬ್ಬದ ಮಧ್ಯಕಾಲದಲ್ಲಿ ಯೇಸು ದೇವಾಲಯಕ್ಕೆ ಹೋಗಿ ಬೋಧಿಸತೊಡಗಿದನು.
15 ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು, “ಶಾಸ್ತ್ರಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವುದಾದರೂ ಹೇಗೆ?” ಎಂದರು.
16 ಅದಕ್ಕೆ ಯೇಸು “ನಾನು ಹೇಳುವ ಬೋಧನೆಯು ನನ್ನದಲ್ಲ. ನನ್ನನ್ನು ಕಳುಹಿಸಿದಾತನದೇ.
17 ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.
18 ತನ್ನಷ್ಟಕ್ಕೆ ತಾನೇ ಮಾತನಾಡುವವನು ತನ್ನ ಸ್ವಂತ ಗೌರವ ಹುಡುಕುತ್ತಾನೆ, ಆದರೆ ತನ್ನನ್ನು ಕಳುಹಿಸಿದಾತನ ಗೌರವನ್ನೇ ಹುಡುಕುವ ಮನುಷ್ಯನೇ ಸತ್ಯವಂತನು; ಆತನಲ್ಲಿ ಕೆಟ್ಟತನವಿಲ್ಲ.
19 ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?” ಎಂದು ಕೇಳಿದನು.
20 ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಯಾರು ಹುಡುಕುತ್ತಿದ್ದಾರೆ?” ಎಂದರು.
ಯೋಹಾ 7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019