Text copied!
Bibles in Kannada

ಯೋಹಾ 8:13-16 in Kannada

Help us?

ಯೋಹಾ 8:13-16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಫರಿಸಾಯರು ಆತನಿಗೆ “ನಿನ್ನ ವಿಷಯವಾಗಿ ನೀನೇ ಸಾಕ್ಷಿ ಹೇಳುತ್ತಿರುವೆ, ನಿನ್ನ ಸಾಕ್ಷಿಯು ನಿಜವಲ್ಲ” ಎಂದು ಹೇಳಲು
14 ಯೇಸು ಅವರಿಗೆ “ನನ್ನ ವಿಷಯವಾಗಿ ನಾನು ಸಾಕ್ಷಿನೀಡಿದರೂ, ನನ್ನ ಸಾಕ್ಷಿ ಸತ್ಯವಾದದ್ದು. ನಾನು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತೇನೆ ಎಂದು ನನಗೆ ತಿಳಿದಿದೆ, ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ಎಂಬುದು ನಿಮಗೆ ತಿಳಿಯದು.
15 ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ, ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.
16 ನಾನು ತೀರ್ಪು ಮಾಡಿದರೂ ನನ್ನ ತೀರ್ಪು ಸತ್ಯವಾದದ್ದೇ. ಏಕೆಂದರೆ ನಾನು ಒಬ್ಬಂಟಿಗನಲ್ಲ, ನನ್ನನ್ನು ಕಳುಹಿಸಿಕೊಟ್ಟ ನನ್ನ ತಂದೆಯೂ ನನ್ನ ಜೊತೆಯಲ್ಲಿ ಇದ್ದಾನೆ.
ಯೋಹಾ 8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019