2ಬೆಳಗಿನಜಾವದಲ್ಲಿ ಆತನು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು. ಆತನು ಕುಳಿತುಕೊಂಡು ಅವರಿಗೆ ಬೋಧಿಸಿದನು.
3ಶಾಸ್ತ್ರಿಗಳೂ ಮತ್ತು ಫರಿಸಾಯರೂ ವ್ಯಭಿಚಾರದಲ್ಲಿ ಸಿಕ್ಕಿಬಿದ್ದ ಒಬ್ಬ ಹೆಂಗಸನ್ನು ಹಿಡಿದು ಆತನ ಬಳಿಗೆ ತಂದು ಆಕೆಯನ್ನು ಅವರ ಗುಂಪಿನ ಮಧ್ಯದಲ್ಲಿ ನಿಲ್ಲಿಸಿ;
4ಯೇಸುವಿಗೆ, “ಬೋಧಕನೇ, ಈ ಸ್ತ್ರೀ ವ್ಯಭಿಚಾರ ಮಾಡುತ್ತಿರುವಾಗಲೇ ಸಿಕ್ಕಿಬಿದ್ದಳು.
5ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯು ಧರ್ಮಶಾಸ್ತ್ರದಲ್ಲಿ ನಮಗೆ ಆಜ್ಞಾಪಿಸಿದ್ದಾನೆ. ಈಕೆಯ ವಿಷಯದಲ್ಲಿ ನೀನು ಏನು ಹೇಳುತ್ತೀ?” ಎಂದು ಆತನನ್ನು ಕೇಳಿದರು.