Text copied!
Bibles in Kannada

ಯೋಹಾ 8:22-38 in Kannada

Help us?

ಯೋಹಾ 8:22-38 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಕ್ಕೆ ಯೆಹೂದ್ಯರು, “ನಾವು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ?” ಎಂದು ಮಾತನಾಡಿಕೊಂಡರು.
23 ಆತನು ಅವರಿಗೆ, “ನೀವು ಕೆಳಗಿನವರು; ನಾನು ಮೇಲಿನಿಂದ ಬಂದವನು. ನೀವು ಈ ಲೋಕದವರು; ನಾನು ಈ ಲೋಕದವನಲ್ಲ.
24 ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವುನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ” ಎಂದು ಹೇಳಿದನು.
25 ಆಗ ಅವರು ಆತನಿಗೆ, “ನೀನು ಯಾರು?” ಎನ್ನಲೂ, ಯೇಸು ಅವರಿಗೆ, “ಮೊದಲಿನಿಂದಲೇನಾನು ನಿಮಗೆ ಹೇಳಿದಂಥದ್ದೇ.
26 ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ, ನಿಮ್ಮ ಮೇಲೆ ತೀರ್ಪು ಮಾಡುವುದಕ್ಕೂ ಅನೇಕ ಸಂಗತಿಗಳು ನನಗುಂಟು. ಆದರೆ ನನ್ನನ್ನು ಕಳುಹಿಸಿ ಕೊಟ್ಟಾತನು ಸತ್ಯವಂತನು. ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ” ಎಂದನು.
27 ಆತನು ತಂದೆಯ ಕುರಿತಾಗಿ ಅವರೊಂದಿಗೆ ಮಾತನಾಡಿದನೆಂದು ಅವರು ಗ್ರಹಿಸಲಿಲ್ಲ.
28 ಹೀಗಿರಲಾಗಿ ಯೇಸು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೆತ್ತಿದಾಗ, ನಾನೇ ಆತನೆಂದೂ, ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನೆಂದು ನೀವು ತಿಳಿದುಕೊಳ್ಳುವಿರಿ. ಆದರೆ ನನ್ನ ತಂದೆಯು ನನಗೆ ಬೋಧಿಸಿದ ಸಂಗತಿಗಳನ್ನೇ ಮಾತನಾಡುತ್ತೇನೆ.
29 ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ. ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವುದರಿಂದ, ಆತನು ನನ್ನನ್ನು ಒಬ್ಬಂಟಿಗನಾಗಿ ಬಿಡುವುದಿಲ್ಲ” ಎಂದನು.
30 ಆತನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಆತನಲ್ಲಿ ನಂಬಿಕೆಯಿಟ್ಟರು.
31 ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ.
32 ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ ಮತ್ತು ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.
33 ಅದಕ್ಕವರು ಆತನಿಗೆ, “ನಾವು ಅಬ್ರಹಾಮನ ಸಂತಾನದವರು ಮತ್ತು ನಾವು ಎಂದೂ ಯಾರಿಗೂ ದಾಸರಾಗಿಲ್ಲ, ನಿಮಗೆ ಬಿಡುಗಡೆಯಾಗುವುದೆಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು.
34 ಅದಕ್ಕೆ ಯೇಸು, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರೆಲ್ಲರು ಪಾಪಕ್ಕೆ ದಾಸರಾಗಿದ್ದಾರೆ.
35 ದಾಸನು ಮನೆಯಲ್ಲಿ ಶಾಶ್ವತವಾಗಿ ಇರುವುದಿಲ್ಲ, ಆದರೆ ಮಗನು ಶಾಶ್ವತವಾಗಿ ಇರುತ್ತಾನೆ.
36 ಆದುದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿಯೂ ನಿಮಗೆ ಬಿಡುಗಡೆಯಾಗುವುದು.
37 ನೀವು ಅಬ್ರಹಾಮನ ಸಂತಾನದವರೆಂದು ನಾನು ಬಲ್ಲೆನು, ಆದರೂ ನನ್ನ ವಾಕ್ಯಕ್ಕೆ ನಿಮ್ಮಲ್ಲಿ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವುದಕ್ಕೆ ನೋಡುತ್ತಿದ್ದೀರಿ.
38 ನಾನುತಂದೆಯ ಬಳಿಯಲ್ಲಿ ನೋಡಿದ್ದನ್ನೇ ಮಾತನಾಡುತ್ತೇನೆ, ನೀವು ತಂದೆಯಿಂದ ಕೇಳಿದ್ದನ್ನೇ ಮಾಡಿರಿ” ಎಂದನು.
ಯೋಹಾ 8 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019