Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 8

ಯೋಹಾ 8:40-52

Help us?
Click on verse(s) to share them!
40ಆದರೂ, ನೀವು ಹಾಗೆ ಮಾಡದೇ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾದ ನನ್ನನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದೀರಿ. ಅಬ್ರಹಾಮನು ಹೀಗೆ ಮಾಡಲಿಲ್ಲ.
41ನೀವು ನಿಮ್ಮ ತಂದೆಯ ಕಾರ್ಯಗಳನ್ನು ಮಾಡುತ್ತಿದ್ದೀರಿ” ಎಂದನು. ಅದಕ್ಕವರು, “ನಾವು ವ್ಯಭಿಚಾರದಿಂದ ಹುಟ್ಟಿದವರಲ್ಲ. ನಮಗೆ ಒಬ್ಬನೇ ತಂದೆ, ಆತನು ದೇವರೇ” ಎಂದರು.
42ಯೇಸು ಅವರಿಗೆ, “ದೇವರು ನಿಮಗೆ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ, ಏಕೆಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ, ಆದರೆ ದೇವರೇ ನನ್ನನ್ನು ಕಳುಹಿಸಿದ್ದಾನೆ.
43ನೀವು ನನ್ನ ಮಾತನ್ನು ಯಾಕೆ ಗ್ರಹಿಸುತ್ತಿಲ್ಲ? ಏಕೆಂದರೆ ನೀವು ನನ್ನ ವಾಕ್ಯಕ್ಕೆ ಕಿವಿಗೊಡದೆ ಇರುವುದರಿಂದಲೇ.
44ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.
45ಆದರೂ, ನಾನು ಸತ್ಯವನ್ನು ಹೇಳುವವನಾಗಿದ್ದರೂ ನೀವು ನನ್ನನ್ನು ನಂಬುವುದಿಲ್ಲ.
46ನನ್ನಲ್ಲಿ ಪಾಪವಿದೆಯೆಂದು ಸಮರ್ಥಿಸಬಲ್ಲವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಹೇಳುವುದಾದರೆ, ನೀವು ನನ್ನನ್ನು ಯಾಕೆ ನಂಬುವುದಿಲ್ಲ?
47ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ” ಎಂದು ಹೇಳಿದನು.
48ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.
49ಅದಕ್ಕೆ ಯೇಸು; “ನನಗೆ ದೆವ್ವ ಹಿಡಿದಿಲ್ಲ. ನಾನು ನನ್ನ ತಂದೆಯನ್ನು ಗೌರವಿಸುತ್ತೇನೆ, ಆದರೆ ನೀವು ನನಗೆ ಅವಮಾನಪಡಿಸುತ್ತೀದ್ದಿರಿ.
50ನಾನು ನನ್ನ ಮಹಿಮೆಯನ್ನು ಹುಡುಕುವುದಿಲ್ಲ, ಮಹಿಮೆಯನ್ನು ಹುಡುಕುವಾತನು ಒಬ್ಬನಿದ್ದಾನೆ, ಆತನೇ ನ್ಯಾಯಾಧಿಪತಿ.
51ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು.
52ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ?

Read ಯೋಹಾ 8ಯೋಹಾ 8
Compare ಯೋಹಾ 8:40-52ಯೋಹಾ 8:40-52