Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 8

ಯೋಹಾ 8:50-55

Help us?
Click on verse(s) to share them!
50ನಾನು ನನ್ನ ಮಹಿಮೆಯನ್ನು ಹುಡುಕುವುದಿಲ್ಲ, ಮಹಿಮೆಯನ್ನು ಹುಡುಕುವಾತನು ಒಬ್ಬನಿದ್ದಾನೆ, ಆತನೇ ನ್ಯಾಯಾಧಿಪತಿ.
51ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು.
52ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ?
53ಸತ್ತುಹೋದ ನಮ್ಮ ತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು, ನಿನ್ನನ್ನೇ ನೀನು ಯಾರೆಂದು ಭಾವಿಸಿಕೊಳ್ಳುತ್ತಿದ್ದೀ?” ಎಂದು ಕೇಳಿದರು.
54ಯೇಸು “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ, ನೀವು ಆತನನ್ನು ನಿಮ್ಮ ದೇವರು ಅನ್ನುತ್ತೀರಿ,
55ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ. ನಾನಂತೂ ಆತನನ್ನು ಬಲ್ಲೆನು, ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು. ಆದರೆ ನಾನು ಆತನನ್ನು ತಿಳಿದಿದ್ದೇನೆ. ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.

Read ಯೋಹಾ 8ಯೋಹಾ 8
Compare ಯೋಹಾ 8:50-55ಯೋಹಾ 8:50-55