Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 9

ಯೋಹಾ 9:11-20

Help us?
Click on verse(s) to share them!
11ಅವನು, “ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನಲ್ಲಿ ಕೆಸರು ಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ’ ಎಂದು ಹೇಳಿದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು. ಆಗ ನನಗೆ ದೃಷ್ಟಿ ಬಂತು” ಎಂದನು.
12ಅವರು, “ಆತನು ಎಲ್ಲಿದ್ದಾನೆ?” ಎಂದು ಅವನನ್ನು ಕೇಳಿದ್ದಕ್ಕೆ, ಅವನು “ನನಗೆ ಗೊತ್ತಿಲ್ಲ” ಎಂದನು.
13ಜನರು ಮೊದಲು ಆ ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು.
14ಯೇಸು ಕೆಸರು ಮಾಡಿ ಅವನಿಗೆ ದೃಷ್ಟಿ ಕೊಟ್ಟ ದಿನವು ಸಬ್ಬತ್ ದಿನವಾಗಿತ್ತು.
15ಆದಕಾರಣ ಆ ಫರಿಸಾಯರು ಸಹ ಅವನನ್ನು ವಿಚಾರಿಸಿ ನಿನಗೆ ಹೇಗೆ ದೃಷ್ಟಿ ಬಂದಿತು ಎಂದು ಪುನಃ ಕೇಳಿದರು. ಅವನು ಅವರಿಗೆ, “ಅವನು ಕೆಸರನ್ನು ನನ್ನ ಕಣ್ಣಿನ ಮೇಲೆ ಇಟ್ಟನು, ನಾನು ತೊಳೆದುಕೊಂಡೆನು, ನನಗೆ ದೃಷ್ಟಿ ಬಂದಿತು” ಎಂದು ಉತ್ತರಕೊಟ್ಟನು.
16ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.
17ಹೀಗಿರಲಾಗಿ ಅವರು ಪುನಃ ಆ ಕುರುಡನನ್ನು, “ಆತನು ನಿನಗೆ ದೃಷ್ಟಿ ಕೊಟ್ಟದ್ದರಿಂದ ನೀನು ಆತನ ವಿಷಯವಾಗಿ ಏನು ಹೇಳುತ್ತೀ?” ಎಂದು ಕೇಳಿದಾಗ, ಅವನು “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು.
18ಆದರೆ ದೃಷ್ಟಿ ಹೊಂದಿದವನ ವಿಷಯವಾಗಿ ಆ ಯೆಹೂದ್ಯರು; ಅವನ ತಂದೆತಾಯಿಗಳನ್ನು ಕರೆದು ವಿಚಾರಿಸುವವರೆಗೂ, ಅವನು ಹುಟ್ಟು ಕುರುಡನಾಗಿದ್ದು, ಈಗ ದೃಷ್ಟಿ ಹೊಂದಿದ್ದಾನೆಂಬುದನ್ನು ನಂಬಲಿಲ್ಲ.
19ಅವರು “ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಇವನಿಗೆ ಹೇಗೆ ದೃಷ್ಟಿ ಬಂದಿತು?” ಎಂದು ಅವರನ್ನು ಕೇಳಿದರು.
20ಅವನ ತಂದೆ ತಾಯಿಗಳು, “ಇವನು ನಮ್ಮ ಮಗನೆಂದೂ ಕುರುಡನಾಗಿ ಹುಟ್ಟಿದನೆಂದೂ ಬಲ್ಲೆವು.

Read ಯೋಹಾ 9ಯೋಹಾ 9
Compare ಯೋಹಾ 9:11-20ಯೋಹಾ 9:11-20