Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 9

ಯೋಹಾ 9:14-24

Help us?
Click on verse(s) to share them!
14ಯೇಸು ಕೆಸರು ಮಾಡಿ ಅವನಿಗೆ ದೃಷ್ಟಿ ಕೊಟ್ಟ ದಿನವು ಸಬ್ಬತ್ ದಿನವಾಗಿತ್ತು.
15ಆದಕಾರಣ ಆ ಫರಿಸಾಯರು ಸಹ ಅವನನ್ನು ವಿಚಾರಿಸಿ ನಿನಗೆ ಹೇಗೆ ದೃಷ್ಟಿ ಬಂದಿತು ಎಂದು ಪುನಃ ಕೇಳಿದರು. ಅವನು ಅವರಿಗೆ, “ಅವನು ಕೆಸರನ್ನು ನನ್ನ ಕಣ್ಣಿನ ಮೇಲೆ ಇಟ್ಟನು, ನಾನು ತೊಳೆದುಕೊಂಡೆನು, ನನಗೆ ದೃಷ್ಟಿ ಬಂದಿತು” ಎಂದು ಉತ್ತರಕೊಟ್ಟನು.
16ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.
17ಹೀಗಿರಲಾಗಿ ಅವರು ಪುನಃ ಆ ಕುರುಡನನ್ನು, “ಆತನು ನಿನಗೆ ದೃಷ್ಟಿ ಕೊಟ್ಟದ್ದರಿಂದ ನೀನು ಆತನ ವಿಷಯವಾಗಿ ಏನು ಹೇಳುತ್ತೀ?” ಎಂದು ಕೇಳಿದಾಗ, ಅವನು “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು.
18ಆದರೆ ದೃಷ್ಟಿ ಹೊಂದಿದವನ ವಿಷಯವಾಗಿ ಆ ಯೆಹೂದ್ಯರು; ಅವನ ತಂದೆತಾಯಿಗಳನ್ನು ಕರೆದು ವಿಚಾರಿಸುವವರೆಗೂ, ಅವನು ಹುಟ್ಟು ಕುರುಡನಾಗಿದ್ದು, ಈಗ ದೃಷ್ಟಿ ಹೊಂದಿದ್ದಾನೆಂಬುದನ್ನು ನಂಬಲಿಲ್ಲ.
19ಅವರು “ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಇವನಿಗೆ ಹೇಗೆ ದೃಷ್ಟಿ ಬಂದಿತು?” ಎಂದು ಅವರನ್ನು ಕೇಳಿದರು.
20ಅವನ ತಂದೆ ತಾಯಿಗಳು, “ಇವನು ನಮ್ಮ ಮಗನೆಂದೂ ಕುರುಡನಾಗಿ ಹುಟ್ಟಿದನೆಂದೂ ಬಲ್ಲೆವು.
21ಈಗ ಇವನು ನೋಡುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೋ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ. ಇವನು ಪ್ರಾಯದವನಾಗಿದ್ದಾನಲ್ಲಾ, ಇವನೇ ತನ್ನ ವಿಷಯವಾಗಿ ಹೇಳುವನು” ಎಂದು ಉತ್ತರಕೊಟ್ಟರು.
22ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.
23“ಇವನು ಪ್ರಾಯದವನು ಇವನನ್ನೇ ಕೇಳಿರಿ” ಎಂದು ಅವನ ತಂದೆತಾಯಿಗಳು ಹೇಳಿದ್ದಕ್ಕೆ ಇದೇ ಕಾರಣ.
24ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು, “ನೀನು ದೇವರಿಗೆ ಗೌರವವನ್ನು ಸಲ್ಲಿಸು; ಈ ಮನುಷ್ಯನು ಪಾಪಿಷ್ಠನೆಂದು ನಾವು ಬಲ್ಲೆವು” ಎಂದರು.

Read ಯೋಹಾ 9ಯೋಹಾ 9
Compare ಯೋಹಾ 9:14-24ಯೋಹಾ 9:14-24