Text copied!
Bibles in Kannada

ಯೋಹಾ 9:15-20 in Kannada

Help us?

ಯೋಹಾ 9:15-20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದಕಾರಣ ಆ ಫರಿಸಾಯರು ಸಹ ಅವನನ್ನು ವಿಚಾರಿಸಿ ನಿನಗೆ ಹೇಗೆ ದೃಷ್ಟಿ ಬಂದಿತು ಎಂದು ಪುನಃ ಕೇಳಿದರು. ಅವನು ಅವರಿಗೆ, “ಅವನು ಕೆಸರನ್ನು ನನ್ನ ಕಣ್ಣಿನ ಮೇಲೆ ಇಟ್ಟನು, ನಾನು ತೊಳೆದುಕೊಂಡೆನು, ನನಗೆ ದೃಷ್ಟಿ ಬಂದಿತು” ಎಂದು ಉತ್ತರಕೊಟ್ಟನು.
16 ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.
17 ಹೀಗಿರಲಾಗಿ ಅವರು ಪುನಃ ಆ ಕುರುಡನನ್ನು, “ಆತನು ನಿನಗೆ ದೃಷ್ಟಿ ಕೊಟ್ಟದ್ದರಿಂದ ನೀನು ಆತನ ವಿಷಯವಾಗಿ ಏನು ಹೇಳುತ್ತೀ?” ಎಂದು ಕೇಳಿದಾಗ, ಅವನು “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು.
18 ಆದರೆ ದೃಷ್ಟಿ ಹೊಂದಿದವನ ವಿಷಯವಾಗಿ ಆ ಯೆಹೂದ್ಯರು; ಅವನ ತಂದೆತಾಯಿಗಳನ್ನು ಕರೆದು ವಿಚಾರಿಸುವವರೆಗೂ, ಅವನು ಹುಟ್ಟು ಕುರುಡನಾಗಿದ್ದು, ಈಗ ದೃಷ್ಟಿ ಹೊಂದಿದ್ದಾನೆಂಬುದನ್ನು ನಂಬಲಿಲ್ಲ.
19 ಅವರು “ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಇವನಿಗೆ ಹೇಗೆ ದೃಷ್ಟಿ ಬಂದಿತು?” ಎಂದು ಅವರನ್ನು ಕೇಳಿದರು.
20 ಅವನ ತಂದೆ ತಾಯಿಗಳು, “ಇವನು ನಮ್ಮ ಮಗನೆಂದೂ ಕುರುಡನಾಗಿ ಹುಟ್ಟಿದನೆಂದೂ ಬಲ್ಲೆವು.
ಯೋಹಾ 9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019