Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 9

ಯೋಹಾ 9:26-30

Help us?
Click on verse(s) to share them!
26ಅವರು ಅವನನ್ನು, “ಆತನು ನಿನಗೆ ಏನು ಮಾಡಿದನು? ನಿನ್ನ ಕಣ್ಣುಗಳನ್ನು ಹೇಗೆ ತೆರೆದನು?” ಎಂದು ಕೇಳಿದ್ದಕ್ಕೆ,
27ಅವನು, “ನಿಮಗೆ ಆಗಲೇ ಹೇಳಿದೆನಲ್ಲಾ, ನೀವು ಕೇಳಲಿಲ್ಲ! ನೀವು ಯಾಕೆ ಪುನಃ ಪುನಃ ಕೇಳುತ್ತಿದ್ದೀರಿ? ನೀವು ಸಹ ಆತನ ಶಿಷ್ಯರಾಗುವುದಕ್ಕೆ ಬಯಸುತ್ತಿದ್ದೀರೋ?” ಎಂದನು.
28ಅದಕ್ಕೆ ಅವರು ಅವನನ್ನು ನಿಂದಿಸಿ, “ನೀನು ಆತನ ಶಿಷ್ಯನು. ಆದರೆ ನಾವು ಮೋಶೆಯ ಶಿಷ್ಯರು.
29ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು, ಆದರೆ ಈತನು ಎಲ್ಲಿಯವನೋ ನಮಗೆ ತಿಳಿಯದು” ಎಂದರು.
30ಅದಕ್ಕೆ ಆ ಮನುಷ್ಯನು, “ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯವನೆಂದು ನಿಮಗೆ ತಿಳಿಯದೆ ಇರುವುದು ಆಶ್ಚರ್ಯವಲ್ಲವೇ!

Read ಯೋಹಾ 9ಯೋಹಾ 9
Compare ಯೋಹಾ 9:26-30ಯೋಹಾ 9:26-30