Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 9

ಯೋಹಾ 9:29-41

Help us?
Click on verse(s) to share them!
29ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು, ಆದರೆ ಈತನು ಎಲ್ಲಿಯವನೋ ನಮಗೆ ತಿಳಿಯದು” ಎಂದರು.
30ಅದಕ್ಕೆ ಆ ಮನುಷ್ಯನು, “ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯವನೆಂದು ನಿಮಗೆ ತಿಳಿಯದೆ ಇರುವುದು ಆಶ್ಚರ್ಯವಲ್ಲವೇ!
31ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.
32ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿದ್ದನ್ನು ಲೋಕಾದಿಯಿಂದ ಒಬ್ಬನಾದರೂ ಕೇಳಲಿಲ್ಲ.
33ಈತನು ದೇವರಿಂದ ಬಂದವನಲ್ಲದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು” ಎಂದನು.
34ಈ ಮಾತಿಗೆ ಅವರು, “ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತಿಯೋ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
35ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು, “ನೀನುಮನುಷ್ಯಕುಮಾರನನ್ನು ನಂಬುತ್ತೀಯೋ?” ಎಂದು ಕೇಳಿದನು.
36ಅದಕ್ಕೆ ಅವನು, “ಕರ್ತನೇ ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು, ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದಾಗ,
37ಯೇಸು, “ನೀನು ಅವನನ್ನು ನೋಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದಾಗ,
38ಅವನು, “ಕರ್ತನೇ, ನಾನು ನಂಬುತ್ತೇನೆ” ಎಂದು ಹೇಳಿ ಆತನಿಗೆ ಅಡ್ಡಬಿದ್ದನು.
39ಆಗ ಯೇಸುವು, “ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು” ಎಂದನು.
40ಇದನ್ನು ಆತನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, “ನಾವು ಸಹ ಕುರುಡರೇನು?” ಎಂದು ಕೇಳಿದಾಗ,
41ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ ‘ನಿಮಗೆ ಕಣ್ಣುಕಾಣುತ್ತವೆ’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪ ನಿಮಗೆ ಉಳಿದಿದೆ” ಎಂದನು.

Read ಯೋಹಾ 9ಯೋಹಾ 9
Compare ಯೋಹಾ 9:29-41ಯೋಹಾ 9:29-41