Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 9

ಯೋಹಾ 9:3-14

Help us?
Click on verse(s) to share them!
3ಯೇಸು, “ಇವನಾಗಲಿ ಇವನ ತಂದೆತಾಯಿಗಳಾಗಲಿ ಪಾಪ ಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವುದಕ್ಕಾಗಿ ಹೀಗಾಯಿತು.
4ನನ್ನನ್ನು ಕಳುಹಿಸಿದಾತನ ಕ್ರಿಯೆಗಳನ್ನು ನಾವು ಹಗಲಿರುವಾಗಲೇ ಮಾಡಬೇಕು. ರಾತ್ರಿ ಬರುತ್ತದೆ, ಅದು ಬಂದಾಗ ಯಾರೂ ಕೆಲಸ ಮಾಡಲಾರರು.
5ನಾನು ಲೋಕದಲ್ಲಿರುವಾಗ ಲೋಕಕ್ಕೆ ಬೆಳಕಾಗಿದ್ದೇನೆ” ಎಂದನು.
6ಆತನು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ, ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು.
7ಆತನು ಅವನಿಗೆ, “ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ” ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
8ಆಗ ನೆರೆಹೊರೆಯವರು ಅವನು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ನೋಡಿದ್ದವರೂ, “ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ?” ಎಂದು ವಿಚಾರಿಸಿದರು.
9ಕೆಲವರು, “ಹೌದು ಇವನೇ” ಎಂದರು. ಇನ್ನೂ ಕೆಲವರು, “ಅವನಲ್ಲ ಆದರೆ ಅವನ ಹಾಗೆ ಇದ್ದಾನೆ” ಎಂದರು. ಆದರೆ ಅವನಾದರೋ, “ನಾನೇ ಅವನು” ಎಂದು ಹೇಳಿದನು.
10ಆಗ ಅವರು “ಹಾಗಾದರೆ ನಿನ್ನ ಕಣ್ಣು ಹೇಗೆ ತೆರೆದವು?” ಎಂದು ಅವನನ್ನು ಕೇಳಿದ್ದಕ್ಕೆ,
11ಅವನು, “ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನಲ್ಲಿ ಕೆಸರು ಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ’ ಎಂದು ಹೇಳಿದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು. ಆಗ ನನಗೆ ದೃಷ್ಟಿ ಬಂತು” ಎಂದನು.
12ಅವರು, “ಆತನು ಎಲ್ಲಿದ್ದಾನೆ?” ಎಂದು ಅವನನ್ನು ಕೇಳಿದ್ದಕ್ಕೆ, ಅವನು “ನನಗೆ ಗೊತ್ತಿಲ್ಲ” ಎಂದನು.
13ಜನರು ಮೊದಲು ಆ ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು.
14ಯೇಸು ಕೆಸರು ಮಾಡಿ ಅವನಿಗೆ ದೃಷ್ಟಿ ಕೊಟ್ಟ ದಿನವು ಸಬ್ಬತ್ ದಿನವಾಗಿತ್ತು.

Read ಯೋಹಾ 9ಯೋಹಾ 9
Compare ಯೋಹಾ 9:3-14ಯೋಹಾ 9:3-14