Text copied!
Bibles in Kannada

ಯೋಹಾ 9:31-41 in Kannada

Help us?

ಯೋಹಾ 9:31-41 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.
32 ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿದ್ದನ್ನು ಲೋಕಾದಿಯಿಂದ ಒಬ್ಬನಾದರೂ ಕೇಳಲಿಲ್ಲ.
33 ಈತನು ದೇವರಿಂದ ಬಂದವನಲ್ಲದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು” ಎಂದನು.
34 ಈ ಮಾತಿಗೆ ಅವರು, “ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತಿಯೋ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
35 ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು, “ನೀನುಮನುಷ್ಯಕುಮಾರನನ್ನು ನಂಬುತ್ತೀಯೋ?” ಎಂದು ಕೇಳಿದನು.
36 ಅದಕ್ಕೆ ಅವನು, “ಕರ್ತನೇ ಆ ಮನುಷ್ಯಕುಮಾರನು ಯಾರು? ನನಗೆ ತಿಳಿಸು, ನಾನು ಆತನಲ್ಲಿ ನಂಬಿಕೆ ಇಡುತ್ತೇನೆ” ಎಂದಾಗ,
37 ಯೇಸು, “ನೀನು ಅವನನ್ನು ನೋಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು” ಎಂದು ಹೇಳಿದಾಗ,
38 ಅವನು, “ಕರ್ತನೇ, ನಾನು ನಂಬುತ್ತೇನೆ” ಎಂದು ಹೇಳಿ ಆತನಿಗೆ ಅಡ್ಡಬಿದ್ದನು.
39 ಆಗ ಯೇಸುವು, “ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು” ಎಂದನು.
40 ಇದನ್ನು ಆತನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಕೇಳಿ, “ನಾವು ಸಹ ಕುರುಡರೇನು?” ಎಂದು ಕೇಳಿದಾಗ,
41 ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ ‘ನಿಮಗೆ ಕಣ್ಣುಕಾಣುತ್ತವೆ’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪ ನಿಮಗೆ ಉಳಿದಿದೆ” ಎಂದನು.
ಯೋಹಾ 9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019