Text copied!
Bibles in Kannada

ಯೋಹಾ 9:6-12 in Kannada

Help us?

ಯೋಹಾ 9:6-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಕೆಸರು ಮಾಡಿ, ಆ ಕೆಸರನ್ನು ಕುರುಡನ ಕಣ್ಣುಗಳಿಗೆ ಹಚ್ಚಿದನು.
7 ಆತನು ಅವನಿಗೆ, “ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ” ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
8 ಆಗ ನೆರೆಹೊರೆಯವರು ಅವನು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ನೋಡಿದ್ದವರೂ, “ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ?” ಎಂದು ವಿಚಾರಿಸಿದರು.
9 ಕೆಲವರು, “ಹೌದು ಇವನೇ” ಎಂದರು. ಇನ್ನೂ ಕೆಲವರು, “ಅವನಲ್ಲ ಆದರೆ ಅವನ ಹಾಗೆ ಇದ್ದಾನೆ” ಎಂದರು. ಆದರೆ ಅವನಾದರೋ, “ನಾನೇ ಅವನು” ಎಂದು ಹೇಳಿದನು.
10 ಆಗ ಅವರು “ಹಾಗಾದರೆ ನಿನ್ನ ಕಣ್ಣು ಹೇಗೆ ತೆರೆದವು?” ಎಂದು ಅವನನ್ನು ಕೇಳಿದ್ದಕ್ಕೆ,
11 ಅವನು, “ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನಲ್ಲಿ ಕೆಸರು ಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ’ ಎಂದು ಹೇಳಿದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು. ಆಗ ನನಗೆ ದೃಷ್ಟಿ ಬಂತು” ಎಂದನು.
12 ಅವರು, “ಆತನು ಎಲ್ಲಿದ್ದಾನೆ?” ಎಂದು ಅವನನ್ನು ಕೇಳಿದ್ದಕ್ಕೆ, ಅವನು “ನನಗೆ ಗೊತ್ತಿಲ್ಲ” ಎಂದನು.
ಯೋಹಾ 9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019