Text copied!
Bibles in Kannada

ರೋಮಾ 10:5-14 in Kannada

Help us?

ರೋಮಾ 10:5-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.
6 ಆದರೆ ನಂಬಿಕೆಯಿಂದುಂಟಾಗುವ ನೀತಿಯು ಈ ರೀತಿಯಾಗಿ ಹೇಳುತ್ತದೆ. “‘ಕ್ರಿಸ್ತನನ್ನು ಭೂಮಿಗಿಳಿಸಿಕೊಂಡು ಬರುವುದಕ್ಕಾಗಿ ಮೇಲಣ ಲೋಕಕ್ಕೆ ಏರಿಹೋದವರಾರು?’
7 ಎಂದಾಗಲಿ ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರುವುದಕ್ಕಾಗಿ ಯಾರು ಪಾತಾಳಲೋಕಕ್ಕೆ ಇಳಿದುಹೋದರು? ಎಂದಾಗಲಿ ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬಾರದು.’” ಆದರೆ ಅದು ಏನನ್ನು ಹೇಳುತ್ತದೆ.
8 “ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ, ನಿನ್ನ ಹೃದಯದಲ್ಲಿಯೂ ಇದೆ.” ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
9 ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ.
10 ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ.
11 “ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.
12 ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.
13 ಆದ್ದರಿಂದ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ.
14 ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?
ರೋಮಾ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019