Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 11

ರೋಮಾ 11:23-32

Help us?
Click on verse(s) to share them!
23ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ.
24ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವುದು ಎಷ್ಟೋ ಯುಕ್ತವಾಗಿದೆಯಲ್ಲವೇ.
25ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.
26ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.
27ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.” ಎಂದು ಬರೆದಿದೆ.
28ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.
29ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.
30ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ,
31ಅದೇ ಪ್ರಕಾರವಾಗಿ ಇಸ್ರಾಯೇಲ್ಯರೂ ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಅವರು ಹೊಂದುವರು.
32ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ.

Read ರೋಮಾ 11ರೋಮಾ 11
Compare ರೋಮಾ 11:23-32ರೋಮಾ 11:23-32