Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 12

ರೋಮಾ 12:1-15

Help us?
Click on verse(s) to share them!
1ಆದ್ದರಿಂದ ಸಹೋದರರೇ, ದೇವರ ಕನಿಕರವನ್ನು ನೆನಪಿಸುತ್ತಾ, ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ, ಮೆಚ್ಚಿಕೆಯಾಗಿಯೂ ಇರುವ ಸಜೀವ ಯಜ್ಞವಾಗಿ ಸಮರ್ಪಿಸಿರೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ವಿವೇಕ ಪೂರ್ವಕವಾದ ಆರಾಧನೆಯು.
2ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
3ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.
4ಯಾಕೆಂದರೆ ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ
5ಹಾಗೆಯೇ ನಾವೆಲ್ಲರೂ ಒಟ್ಟಾಗಿ ಕ್ರಿಸ್ತನಲ್ಲಿ ಒಂದೇ ದೇಹವಾಗಿದ್ದು ಒಬ್ಬೊಬ್ಬರಾಗಿ ವಿವಿಧ ಅಂಗಗಳಾಗಿದ್ದೇವೆ.
6ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ಹೊಂದಿದ ವರವು ಪ್ರವಾದನೆ ರೂಪವಾಗಿದ್ದರೆ, ನಮ್ಮ ನಂಬಿಕೆಗೆ ತಕ್ಕ ಹಾಗೆ ಪ್ರವಾದನೆ ಹೇಳೋಣ.
7ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ.
8ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.
9ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.
10ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.
11ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.
12ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.
13ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.
14ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ; ಶಪಿಸದೆ ಆಶೀರ್ವದಿಸಿರಿ.
15ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.

Read ರೋಮಾ 12ರೋಮಾ 12
Compare ರೋಮಾ 12:1-15ರೋಮಾ 12:1-15