Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 12

ರೋಮಾ 12:6-21

Help us?
Click on verse(s) to share them!
6ದೇವರು ನಮಗೆ ಕೃಪೆಮಾಡಿದ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ಹೊಂದಿದ ವರವು ಪ್ರವಾದನೆ ರೂಪವಾಗಿದ್ದರೆ, ನಮ್ಮ ನಂಬಿಕೆಗೆ ತಕ್ಕ ಹಾಗೆ ಪ್ರವಾದನೆ ಹೇಳೋಣ.
7ಅದು ಸಭಾಸೇವೆಯ ರೂಪವಾಗಿದ್ದರೆ ಪ್ರಾಮಾಣಿಕವಾಗಿ ಸಭಾಸೇವೆಯನ್ನು ಮಾಡುತ್ತಾ ಇರೋಣ.
8ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.
9ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನವನ್ನು ತಿರಸ್ಕರಿಸಿರಿ, ಒಳ್ಳೆಯದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.
10ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.
11ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.
12ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರಿ, ಕಷ್ಟಗಳಲ್ಲಿ ಸೈರಣೆಯುಳ್ಳವರಾಗಿರಿ. ಬೇಸರಗೊಳ್ಳದೆ ಪ್ರಾರ್ಥನೆ ಮಾಡಿರಿ.
13ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.
14ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ; ಶಪಿಸದೆ ಆಶೀರ್ವದಿಸಿರಿ.
15ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.
16ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.
17ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.
18ಸಾಧ್ಯವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನದಿಂದಿರಿ.
19ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.
20ಹಾಗಾದರೆ “ನಿನ್ನ ವೈರಿ ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವುದಕ್ಕೆ ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವುದು”.
21ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೆತನದಿಂದ ಕೆಟ್ಟತನವನ್ನು ಸೋಲಿಸಿರಿ.

Read ರೋಮಾ 12ರೋಮಾ 12
Compare ರೋಮಾ 12:6-21ರೋಮಾ 12:6-21