Text copied!
Bibles in Kannada

ರೋಮಾ 13:7-9 in Kannada

Help us?

ರೋಮಾ 13:7-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ.
8 ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.
9 ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.
ರೋಮಾ 13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019