Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 13

ರೋಮಾ 13:8-11

Help us?
Click on verse(s) to share them!
8ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮ್ಮ ಮೇಲೆ ಇರಬಾರದು. ತನ್ನ ನೆರೆಹೊರೆಯವರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನೆಲ್ಲಾ ನೆರವೇರಿಸಿದ್ದಾನೆ.
9ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.
10ಪ್ರೀತಿಯು ಮತ್ತೊಬ್ಬರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಆದಕಾರಣ ಪ್ರೀತಿಯಿಂದಲೇ ಧರ್ಮಶಾಸ್ತ್ರವು ನೆರವೇರುತ್ತದೆ.
11ಈಗಿನ ಕಾಲವು ನಿದ್ದೆಯಿಂದ ಎಚ್ಚರವಾಗಿರತಕ್ಕ ಕಾಲವೆಂದು ಅರಿತು ಇದನ್ನೆಲ್ಲಾ ಮಾಡಿರಿ. ನಾವು ಕ್ರಿಸ್ತನನ್ನು ಮೊದಲು ನಂಬಿದ ಕಾಲದಲ್ಲಿ ಇದ್ದುದಕ್ಕಿಂತ ಈಗ ನಮ್ಮ ವಿಮೋಚನೆಯ ಕಾಲವು ಹತ್ತಿರವಾಗಿದೆ.

Read ರೋಮಾ 13ರೋಮಾ 13
Compare ರೋಮಾ 13:8-11ರೋಮಾ 13:8-11