Text copied!
Bibles in Kannada

ರೋಮಾ 14:1-14 in Kannada

Help us?

ರೋಮಾ 14:1-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಂಬಿಕೆಯಲ್ಲಿ ದೃಢವಿಲ್ಲದವರನ್ನು ಸೇರಿಸಿಕೊಳ್ಳಿರಿ, ಆದರೆ ಸಂದೇಹಾಸ್ಪದವಾದ ವಿಷಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ.
2 ಒಬ್ಬನು ಯಾವುದನ್ನಾದರೂ ತಿನ್ನಬಹುದೆಂದು ನಂಬುತ್ತಾನೆ; ನಂಬಿಕೆಯಲ್ಲಿ ದೃಢವಿಲ್ಲದವನು ಕಾಯಿಪಲ್ಯಗಳನ್ನು ಮಾತ್ರ ತಿನ್ನುತ್ತಾನೆ.
3 ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ?
4 ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.
5 ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿನಗಳನ್ನೂ ವಿಶೇಷವೆಂದೆಣಿಸುತ್ತಾನೆ; ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ಚಂಚಲಪಡದೆ ದೃಢವಾಗಿರಲಿ.
6 ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.
7 ನಮ್ಮಲ್ಲಿ ಯಾರು ತನಗಾಗಿ ಬದುಕುವುದು ಇಲ್ಲ. ತನಗಾಗಿ ಸಾಯುವುದೂ ಇಲ್ಲ,
8 ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತನವರೇ.
9 ಯಾಕೆಂದರೆ ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು.
10 ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.
11 ಪವಿತ್ರ ಶಾಸ್ತ್ರದಲ್ಲಿ: “ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ” ಎಂದು ಬರೆದಿದೆ.
12 ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.
13 ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.
14 ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ.
ರೋಮಾ 14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019