Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 14

ರೋಮಾ 14:9-19

Help us?
Click on verse(s) to share them!
9ಯಾಕೆಂದರೆ ಸತ್ತವರಿಗೂ, ಜೀವಿಸುವವರಿಗೂ ಒಡೆಯನಾಗಬೇಕಂತಲೇ ಕ್ರಿಸ್ತನು ಸತ್ತು ಜೀವಿತನಾದನು.
10ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.
11ಪವಿತ್ರ ಶಾಸ್ತ್ರದಲ್ಲಿ: “ನಾನು ಜೀವಿಸುವುದರಿಂದ ಪ್ರತಿಯೊಬ್ಬನೂ ನನ್ನ ಮುಂದೆ ಮೊಣಕಾಲೂರುವನು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಆರಿಕೆಮಾಡುವರು ಎಂದು ಕರ್ತನು ಹೇಳುತ್ತಾನೆ” ಎಂದು ಬರೆದಿದೆ.
12ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.
13ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.
14ಯಾವ ಪದಾರ್ಥವೂ ಸ್ವತಃ ಅಶುದ್ಧವಾದದ್ದಲ್ಲವೆಂದು ಕರ್ತನಾದ ಯೇಸುವಿನಲ್ಲಿದ್ದುಕೊಂಡು ದೃಢವಾಗಿ ನಂಬಿದ್ದೇನೆ; ಆದರೆ ಯಾವುದಾದರೂ ಒಂದು ಪದಾರ್ಥವನ್ನು ಅಶುದ್ಧವೆಂದು ಒಬ್ಬನು ಭಾವಿಸಿದರೆ ಅವನಿಗೆ ಅದು ಅಶುದ್ಧವಾಗಿರಲಿ.
15ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾದರೆ ನೀನು ಪ್ರೀತಿಗೆ ತಕ್ಕಂತೆ ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ ಅವನನ್ನು ನಿನಗೆ ಇಷ್ಟವಾದ ಆಹಾರದ ನಿಮಿತ್ತ ಕೆಡಿಸಬಾರದು.
16ನಿಮಗಿರುವ ಉತ್ತಮ ಕ್ರಮಗಳು ದೂಷಣೆಗೆ ಆಸ್ಪದವಾಗಬಾರದು.
17ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.
18ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರನ್ನು ಮೆಚ್ಚಿಸುವವನೂ, ಮನುಷ್ಯರಿಗೆ ಒಳ್ಳೆಯದನ್ನು ಮಾಡುವವನೂ ಆಗಿರಲಿ.
19ಆದ್ದರಿಂದ ನಾವು ಸಮಾಧಾನಕ್ಕೂ, ಪರಸ್ಪರ ಭಕ್ತಿವೃದ್ಧಿಗೂ ಅನುಕೂಲವಾಗಿರುವಂಥವುಗಳನ್ನು ಸಾಧಿಸಿಕೊಳ್ಳೋಣ.

Read ರೋಮಾ 14ರೋಮಾ 14
Compare ರೋಮಾ 14:9-19ರೋಮಾ 14:9-19