Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 15

ರೋಮಾ 15:21-27

Help us?
Click on verse(s) to share them!
21“ಯಾರಿಗೆ ಆತನ ಸಮಾಚಾರ ತಿಳಿದಿರುವುದಿಲ್ಲವೋ ಅವರೇ ಆತನನ್ನು ನೋಡುವರು. ಯಾರು ಆತನ ಬಗ್ಗೆ ಕೇಳಿರುವುದಿಲ್ಲವೋ ಅವರು ಆತನನ್ನು ಗ್ರಹಿಸಿಕೊಳ್ಳುವರು.” ಎಂಬುದಾಗಿ ಬರೆದಿರುವ ಪ್ರಕಾರ ನನ್ನ ಕೆಲಸವನ್ನು ನಡಿಸಿದ್ದೇನೆ.
22ಈ ಕಾರಣದಿಂದ ನಿಮ್ಮ ಬಳಿಗೆ ಬರುವುದಕ್ಕೆ ನನಗೆ ಅನೇಕಾವರ್ತಿ ಅಡೆತಡೆಗಳಾದವು.
23ಆದರೆ ಇನ್ನು ಮೇಲೆ ಈ ಪ್ರಾಂತ್ಯಗಳಲ್ಲಿ ನನಗೆ ಸ್ಥಳವಿಲ್ಲದ್ದರಿಂದಲೂ ನಿಮ್ಮ ಬಳಿಗೆ ಬರುವುದಕ್ಕೆ ಅನೇಕ ವರ್ಷಗಳಿಂದ ಆಸಕ್ತಿ ಇದ್ದುದರಿಂದಲೂ
24ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನನ್ನ ಮಾರ್ಗದಲ್ಲಿ ನಿಮ್ಮ ದರ್ಶನವನ್ನು ಮಾಡಬೇಕೆಂದು ಬಯಸಿದ್ದೇನೆ. ತರುವಾಯ ನಿಮ್ಮ ಜೊತೆಯಲ್ಲಿ ಸ್ವಲ್ಪ ಮಟ್ಟಿಗೆ ಸಂತೋಷವಾಗಿ ಸಮಯಕಳೆದ ನಂತರ ನೀವು ಆ ದೇಶಕ್ಕೆ ನನ್ನನ್ನು ಕಳುಹಿಸಿಕೊಡುವಿರೆಂದು ನಂಬುತ್ತೇನೆ.
25ಆದರೆ ಈಗ ನಾನು ದೇವಜನರಿಗೆ ಸೇವೆಸಲ್ಲಿಸುವುದಕ್ಕಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ.
26ಯಾಕೆಂದರೆ ಯೆರೂಸಲೇಮಿನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬುದಾಗಿ ಮಕೆದೋನ್ಯ, ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.
27ಇದನ್ನು ಮಾಡುವುದಕ್ಕೆ ಇವರು ಇಷ್ಟಪಟ್ಟಿದ್ದಲ್ಲದೆ ಇವರು ಅವರ ಹಂಗಿನವರಾಗಿದ್ದಾರೆ. ಹೇಗೆಂದರೆ ಅನ್ಯಜನರು ಅವರ ಆತ್ಮ ಸಂಬಂಧವಾದ ಸಂಪತ್ತಿಗೆ ಪಾಲುಗಾರರಾದ ಮೇಲೆ ಲೋಕಸಂಬಂಧವಾದ ಕಾರ್ಯಗಳಲ್ಲಿ ಅವರಿಗೆ ಸೇವೆ ಮಾಡುವ ಹಂಗಿನಲ್ಲಿದ್ದಾರಲ್ಲವೇ.

Read ರೋಮಾ 15ರೋಮಾ 15
Compare ರೋಮಾ 15:21-27ರೋಮಾ 15:21-27