Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 15

ರೋಮಾ 15:26-31

Help us?
Click on verse(s) to share them!
26ಯಾಕೆಂದರೆ ಯೆರೂಸಲೇಮಿನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬುದಾಗಿ ಮಕೆದೋನ್ಯ, ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.
27ಇದನ್ನು ಮಾಡುವುದಕ್ಕೆ ಇವರು ಇಷ್ಟಪಟ್ಟಿದ್ದಲ್ಲದೆ ಇವರು ಅವರ ಹಂಗಿನವರಾಗಿದ್ದಾರೆ. ಹೇಗೆಂದರೆ ಅನ್ಯಜನರು ಅವರ ಆತ್ಮ ಸಂಬಂಧವಾದ ಸಂಪತ್ತಿಗೆ ಪಾಲುಗಾರರಾದ ಮೇಲೆ ಲೋಕಸಂಬಂಧವಾದ ಕಾರ್ಯಗಳಲ್ಲಿ ಅವರಿಗೆ ಸೇವೆ ಮಾಡುವ ಹಂಗಿನಲ್ಲಿದ್ದಾರಲ್ಲವೇ.
28ನಾನು ಈ ಕೆಲಸವನ್ನು ಮುಗಿಸಿಕೊಂಡು ಈ ಪ್ರೀತಿಯ ಫಲವನ್ನು ಅಲ್ಲಿಯವರ ವಶಕ್ಕೆ ಸಂಪೂರ್ಣವಾಗಿ ಕೊಟ್ಟ ಮೇಲೆ ನಿಮ್ಮ ಮಾರ್ಗವಾಗಿ ಸ್ಪೇನ್ ದೇಶಕ್ಕೆ ಹೋಗುವೆನು.
29ಇದಲ್ಲದೆ ನಿಮ್ಮ ಬಳಿಗೆ ಬರುವಾಗ ಕ್ರಿಸ್ತನಿಂದಾಗುವ ಆಶೀರ್ವಾದಗಳನ್ನು ಹೇರಳವಾಗಿ ತರುವೆನೆಂದು ಬಲ್ಲೆನು.
30ಸಹೋದರರೇ, ನೀವು ನನಗೋಸ್ಕರ ದೇವರ ಮುಂದೆ ಮಾಡುವ ಪ್ರಾರ್ಥನೆಗಳಲ್ಲಿ ನನ್ನೊಂದಿಗೆ ಬಲವಾಗಿ ವಿಜ್ಞಾಪಿಸಿಕೊಳ್ಳಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ನಿಮಿತ್ತವಾಗಿಯೂ ಪವಿತ್ರಾತ್ಮನಿಂದಾಗುವ ಪ್ರೀತಿಯ ನಿಮಿತ್ತವಾಗಿಯೂ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
31ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಯಿಂದ ತಪ್ಪಿಸಬೇಕೆಂತಲೂ ಯೆರೂಸಲೇಮಿಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.

Read ರೋಮಾ 15ರೋಮಾ 15
Compare ರೋಮಾ 15:26-31ರೋಮಾ 15:26-31