Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 16

ರೋಮಾ 16:17-25

Help us?
Click on verse(s) to share them!
17ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
18ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
19ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.
20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.
21ನನ್ನ ಜೊತೆಕೆಲಸದವನಾದ ತಿಮೊಥೆಯನೂ, ನನ್ನ ಸಂಬಂಧಿಕರಾದ ಲೂಕ್ಯನೂ, ಯಾಸೋನನೂ ಮತ್ತು ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ
22ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ.
23ನನಗೂ ಮತ್ತು ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಎರಸ್ತನೂ, ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
24ನಮ್ಮ ಕರ್ತನಾದ ಯೇಸುಕ್ರಿಸ್ತನ ಕೃಪೆಯ ನಿಮ್ಮೊಂದಿಗಿರಲಿ. ಆಮೆನ್.
25ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಶಾಸ್ತ್ರಗಳ ಮೂಲಕ ಅನ್ಯಜನರೆಲ್ಲರಿಗೂ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವುದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪೂರ್ವಕಾಲಗಳಲ್ಲಿ ಮರೆಯಾಗಿದ್ದು ಈಗ ಬೆಳಕಿಗೆ ಬಂದಿರುವಂತಹದ್ದೂ, ಈ ಮರ್ಮಕ್ಕೆ ಅನುಸಾರ ಎಂದರೆ ಯೇಸು ಕ್ರಿಸ್ತನ ವಿಷಯವಾದಂಥ ಹಾಗೂ ನಾನು ಸಾರುವಂಥ ಸುವಾರ್ತೆಗನುಸಾರವಾಗಿ ನಿಮ್ಮನ್ನು ಸ್ಥಿರಪಡಿಸುವುದಕ್ಕೆ ಶಕ್ತನಾಗಿರುವ,

Read ರೋಮಾ 16ರೋಮಾ 16
Compare ರೋಮಾ 16:17-25ರೋಮಾ 16:17-25