Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 16

ರೋಮಾ 16:7-23

Help us?
Click on verse(s) to share them!
7ನನ್ನ ಸ್ವಜನರೂ ಹಾಗೂ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ, ಯೂನ್ಯನಿಗೂ ವಂದನೆ; ಅವರು ಅಪೊಸ್ತಲರಲ್ಲಿ ಪ್ರಸಿದ್ಧರಾಗಿದ್ದಾರಲ್ಲದೆ, ನನಗಿಂತ ಮೊದಲೇ ಕ್ರಿಸ್ತನನ್ನು ನಂಬಿದವರೂ ಆಗಿದ್ದರು.
8ಕರ್ತನಲ್ಲಿ ನನ್ನ ಪ್ರಿಯನಾದ ಅಂಪ್ಲಿಯಾತನಿಗೆ ವಂದನೆ.
9ಕ್ರಿಸ್ತನ ಸೇವೆಯಲ್ಲಿ ನಮ್ಮ ಜೊತೆ ಕೆಲಸದವನಾದ ಉರ್ಬಾನನಿಗೂ, ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.
10ಕ್ರಿಸ್ತನ ಸೇವೆಯಲ್ಲಿ ಮೆಚ್ಚಿಕೆಗೆಪಾತ್ರನಾದ ಅಪೆಲ್ಲನಿಗೆ ವಂದನೆ. ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.
11ನನ್ನ ಸಂಬಂಧಿಕನಾದ ಹೆರೂಡಿಯೋನನಿಗೆ ವಂದನೆ. ನಾರ್ಕಿಸ್ಸನ ಮನೆಯವರೊಳಗೆ ಕ್ರಿಸ್ತನನ್ನು ನಂಬಿದವರಿಗೆ ವಂದನೆಗಳು.
12ಕರ್ತನ ಸೇವೆಯಲ್ಲಿ ಪ್ರಯಾಸಪಟ್ಟವರಾದ ತ್ರುಫೈನಳಿಗೂ, ತ್ರುಫೋಸಳಗೂ ವಂದನೆಗಳು. ಕರ್ತನ ಸೇವೆಯಲ್ಲಿ ಬಹಳವಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀಸಳಿಗೆ ವಂದನೆ.
13ಕರ್ತನಲ್ಲಿ ಆರಿಸಿಕೊಳ್ಳಲ್ಪಟ್ಟವನಾದ ರೂಫನಿಗೂ, ನನಗೆ ತಾಯಿಯಂತಿರುವ ಅವನ ತಾಯಿಗೂ ವಂದನೆಗಳು.
14ಅಸುಂಕ್ರಿತನಿಗೂ, ಪ್ಲೆಗೋನನಿಗೂ, ಹೆರ್ಮೇಯನಿಗೂ, ಪತ್ರೋಬನಿಗೂ, ಹೆರ್ಮಾನನಿಗೂ, ಅವರೊಂದಿಗಿರುವ ಸಹೋದರರಿಗೂ ವಂದನೆಗಳು.
15ಫಿಲೊಲೊಗನಿಗೂ, ಯೂಲ್ಯಳಿಗೂ, ನೇರ್ಯನಿಗೂ, ಅವನ ತಂಗಿಗೂ, ಒಲುಂಪನಿಗೂ, ಇವರೊಂದಿಗಿರುವ ದೇವಜನರೆಲ್ಲರಿಗೂ ವಂದನೆಗಳು.
16ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳಲ್ಲಿರುವವರೆಲ್ಲರೂ ನಿಮ್ಮನ್ನು ವಂದಿಸುತ್ತಿದ್ದಾರೆ.
17ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
18ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
19ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.
20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.
21ನನ್ನ ಜೊತೆಕೆಲಸದವನಾದ ತಿಮೊಥೆಯನೂ, ನನ್ನ ಸಂಬಂಧಿಕರಾದ ಲೂಕ್ಯನೂ, ಯಾಸೋನನೂ ಮತ್ತು ಸೋಸಿಪತ್ರನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ
22ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ.
23ನನಗೂ ಮತ್ತು ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಎರಸ್ತನೂ, ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.

Read ರೋಮಾ 16ರೋಮಾ 16
Compare ರೋಮಾ 16:7-23ರೋಮಾ 16:7-23