Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 1

ರೋಮಾ 1:17-23

Help us?
Click on verse(s) to share them!
17ಹೇಗೆಂದರೆ ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ತೋರಿಬರುತ್ತದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನೆಂಬ” ಶಾಸ್ತ್ರೋಕ್ತಿಯ ಪ್ರಕಾರ ಆ ನೀತಿಯು ನಂಬಿಕೆಯ ಫಲವಾಗಿದ್ದು ನಂಬಿಕೆಯನ್ನು ವೃದ್ಧಿಪಡಿಸುವಂಥದಾಗಿದೆ.
18ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,
19ಯಾಕೆಂದರೆ ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದಿದೆ. ಅದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿರುವನು.
20ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ.
21ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.
22ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.
23ಲಯವಿಲ್ಲದ ದೇವರ ಮಹಿಮೆಯನ್ನು ಅವರು ನಾಶವಾಗುವ ಮನುಷ್ಯ, ಪಶು, ಪಕ್ಷಿ, ಸರಿಸೃಪಗಳು ಇತ್ಯಾದಿಗಳ ರೂಪಗಳೊಂದಿಗೆ ಬದಲಿಸಿಕೊಂಡರು.

Read ರೋಮಾ 1ರೋಮಾ 1
Compare ರೋಮಾ 1:17-23ರೋಮಾ 1:17-23