Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 1

ರೋಮಾ 1:18-28

Help us?
Click on verse(s) to share them!
18ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,
19ಯಾಕೆಂದರೆ ದೇವರ ವಿಷಯವಾಗಿ ತಿಳಿಯಬಹುದಾದದ್ದು ಅವರ ಮನಸ್ಸಿಗೆ ಸ್ಪಷ್ಟವಾಗಿ ತಿಳಿದಿದೆ. ಅದನ್ನು ಅವರಿಗೆ ದೇವರೇ ಸ್ಪಷ್ಟವಾಗಿ ತಿಳಿಸಿರುವನು.
20ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ.
21ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ.
22ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.
23ಲಯವಿಲ್ಲದ ದೇವರ ಮಹಿಮೆಯನ್ನು ಅವರು ನಾಶವಾಗುವ ಮನುಷ್ಯ, ಪಶು, ಪಕ್ಷಿ, ಸರಿಸೃಪಗಳು ಇತ್ಯಾದಿಗಳ ರೂಪಗಳೊಂದಿಗೆ ಬದಲಿಸಿಕೊಂಡರು.
24ಆದಕಾರಣ ಅವರು ಮನಸ್ಸಿನ ದುರಾಶೆಗಳಂತೆ ನಡೆದು ತಮ್ಮ ತಮ್ಮ ದೇಹಗಳನ್ನು ತಮ್ಮೊಳಗೆ ಮಾನಹೀನಮಾಡಿಕೊಳ್ಳಲಿ ಎಂದು ದೇವರು ಅವರನ್ನು ಹೊಲಸಾದ ಕೆಟ್ಟ ನಡತೆಗಳಿಗೆ ಒಪ್ಪಿಸಿಬಿಟ್ಟನು.
25ಅವರು ಸತ್ಯ ದೇವರನ್ನು ಬಿಟ್ಟು ಅಸತ್ಯವಾದದ್ದನ್ನು ಹಿಡಿದುಕೊಂಡು ಸೃಷ್ಟಿ ಕರ್ತನನ್ನು ಆರಾಧಿಸದೆ ಸೃಷ್ಟಿಯನ್ನೇ ಪೂಜಿಸಿ ಆರಾಧಿಸುವವರಾದರು. ಆದರೆ, ಆತನೇ ನಿರಂತರ ಸ್ತುತಿ ಹೊಂದತಕ್ಕವನು, ಆಮೆನ್.
26ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗಳಿಗೆ ಒಪ್ಪಿಸಿಬಿಟ್ಟನು. ಅವರ ಹೆಂಗಸರು ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು.
27ಅದರಂತೆ ಪುರುಷರು ಸಹ ಸ್ವಾಭಾವಿಕವಾದ ಸ್ತ್ರೀಸಂಗವನ್ನು ತೊರೆದು ತಮ್ಮತಮ್ಮಲಿಯೇ ಕಾಮೋದ್ರೇಕಗೊಂಡರು; ಸಲಿಂಗಕಾಮಿಗಳಾದರು; ಲಜ್ಜಾಹೀನರಾಗಿ ವರ್ತಿಸಿದರು; ತಮ್ಮ ದುರ್ನಡತೆಗೆ ತಕ್ಕ ಶಿಕ್ಷೆಯನ್ನು ತಮ್ಮ ಮೇಲೆ ಬರಮಾಡಿಕೊಂಡರು.
28ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.

Read ರೋಮಾ 1ರೋಮಾ 1
Compare ರೋಮಾ 1:18-28ರೋಮಾ 1:18-28