Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 2

ರೋಮಾ 2:13-19

Help us?
Click on verse(s) to share them!
13ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.
14ಧರ್ಮಶಾಸ್ತ್ರವಿಲ್ಲದ ಅನ್ಯಜನರು ಸ್ವಾಭಾವಿಕವಾಗಿ ಧರ್ಮಶಾಸ್ತ್ರದಲ್ಲಿ ಹೇಳಿದಂತೆ ನಡೆದುಕೊಂಡರೆ ಅವರು ಧರ್ಮಶಾಸ್ತ್ರವಿಲ್ಲದವರಾಗಿದ್ದರೂ, ತಮಗೆ ತಾವೇ ಧರ್ಮಶಾಸ್ತ್ರವಾಗಿದ್ದಾರೆ.
15ಇದರಿಂದ ಅವರು ಧರ್ಮಶಾಸ್ತ್ರದ ಮುಖ್ಯ ತಾತ್ಪರ್ಯ ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರ್ಪಡಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಹ ಸಾಕ್ಷಿ ನುಡಿಯುತ್ತದೆ; ಅವರ ಆಲೋಚನೆಗಳು ವಾದಿಪ್ರತಿವಾದಿಗಳಂತೆ, ಇದು ತಪ್ಪೆಂದು ಅದು ತಪ್ಪಲ್ಲವೆಂದು ಹೇಳುತ್ತದೆ.
16ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.
17ನೀನು ಯೆಹೂದ್ಯನೆನಸಿಕೊಂಡು, ಧರ್ಮಶಾಸ್ತ್ರದಲ್ಲಿ ಭರವಸವಿಟ್ಟು, ದೇವರಲ್ಲಿ ಹೆಮ್ಮೆಯಿಂದ ಸಂತೋಷಿಸಿ,
18ಧರ್ಮಶಾಸ್ತ್ರದಿಂದ ಉಪದೇಶವನ್ನು ಹೊಂದಿ, ಆತನ ಚಿತ್ತವನ್ನು ಬಲ್ಲವನೂ, ಇದು ತಕ್ಕದ್ದು ಅದು ತಕ್ಕದ್ದಲ್ಲವೆಂದು ವಿವೇಚಿಸುವವನೂ ಆಗಿದ್ದೀಯೆ.
19ಧರ್ಮಶಾಸ್ತ್ರದಲ್ಲಿ ಜ್ಞಾನಸತ್ಯಗಳ ಸ್ವರೂಪವೇ ನಿನಗೆ ತಿಳಿದಿರುವುದರಿಂದ ಕುರುಡರಿಗೆ ದಾರಿತೋರಿಸುವವನೂ, ಕತ್ತಲೆಯಲ್ಲಿರುವವರಿಗೆ ಬೆಳಕೂ,

Read ರೋಮಾ 2ರೋಮಾ 2
Compare ರೋಮಾ 2:13-19ರೋಮಾ 2:13-19