Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 2

ರೋಮಾ 2:2-14

Help us?
Click on verse(s) to share them!
2ಅಂಥವುಗಳನ್ನು ಅನುಸರಿಸುವವರ ವಿಷಯದಲ್ಲಿ ದೇವರು ಕೊಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು.
3ಇದನ್ನು ಪರಿಗಣಿಸು ಎಲೈ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ?
4ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?
5ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.
6ದೇವರು ಪ್ರತಿಯೊಬ್ಬರಿಗೆ ಅವರವರ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು,
7ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು.
8ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು.
9ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು.
10ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು.
11ದೇವರಲ್ಲಿ ಪಕ್ಷಪಾತವಿಲ್ಲ.
12ಧರ್ಮಶಾಸ್ತ್ರವಿಲ್ಲದೆ ಪಾಪಮಾಡಿದವರು ಧರ್ಮಶಾಸ್ತ್ರವಿಲ್ಲದವರಾಗಿ ನಾಶಹೊಂದುವರು; ಮತ್ತು ಧರ್ಮಶಾಸ್ತ್ರಕ್ಕನುಸಾರವಾಗಿದ್ದು ಪಾಪಮಾಡಿದವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.
13ಧರ್ಮಶಾಸ್ತ್ರವನ್ನು ಕೇಳಿದ ಮಾತ್ರದಿಂದಲೇ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗುವುದಿಲ್ಲ; ಅದನ್ನು ಅನುಸರಿಸುವವರೇ ನೀತಿವಂತರೆಂದು ನಿರ್ಣಯಿಸಲ್ಪಡುವರು.
14ಧರ್ಮಶಾಸ್ತ್ರವಿಲ್ಲದ ಅನ್ಯಜನರು ಸ್ವಾಭಾವಿಕವಾಗಿ ಧರ್ಮಶಾಸ್ತ್ರದಲ್ಲಿ ಹೇಳಿದಂತೆ ನಡೆದುಕೊಂಡರೆ ಅವರು ಧರ್ಮಶಾಸ್ತ್ರವಿಲ್ಲದವರಾಗಿದ್ದರೂ, ತಮಗೆ ತಾವೇ ಧರ್ಮಶಾಸ್ತ್ರವಾಗಿದ್ದಾರೆ.

Read ರೋಮಾ 2ರೋಮಾ 2
Compare ರೋಮಾ 2:2-14ರೋಮಾ 2:2-14