Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ರೋಮಾ - ರೋಮಾ 2

ರೋಮಾ 2:20-25

Help us?
Click on verse(s) to share them!
20ತಿಳಿವಳಿಕೆಯಿಲ್ಲದವರಿಗೆ ಶಿಕ್ಷಕನೂ, ಬಾಲಕರಿಗೆ ಉಪಾಧ್ಯಾಯನೂ, ಆಗಿದ್ದೇನೆಂದು ನಂಬಿಕೊಂಡಿದ್ದಿಯೇ,
21ಮತ್ತೊಬ್ಬನಿಗೆ ಉಪದೇಶ ಮಾಡುವ ನಿನಗೆ ನೀನೇ ಉಪದೇಶಮಾಡಿಕೊಳ್ಳದೆ ಇದ್ದೀಯೋ? ಕದಿಯಬಾರದೆಂದು ಬೋಧಿಸುವ ನೀನೇ ಕಳ್ಳತನ ಮಾಡುತ್ತಿಯೇನು?
22ಹಾದರ ಮಾಡಬಾರದೆಂದು ಹೇಳುವ ನೀನೇ ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ವಿರೋಧಿಸುವ ನೀನು ದೇವಾಲಯವನ್ನೇ ದೋಚುತ್ತಿಯೇನು?
23ಧರ್ಮಶಾಸ್ತ್ರದಲ್ಲಿ ಹೆಮ್ಮೆಯಿಂದ ಹೆಚ್ಚಳಪಡುವ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆದು ದೇವರನ್ನು ಅವಮಾನಪಡಿಸುತ್ತೀಯೋ?
24“ನಿಮ್ಮ ದೆಸೆಯಿಂದ ಅನ್ಯಜನರ ಮಧ್ಯದಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತಿದೆಂದು” ಬರೆದಿದೆಯಲ್ಲಾ.
25ನೀನು ಧರ್ಮಶಾಸ್ತ್ರಕ್ಕನುಸಾರವಾಗಿ ನಡೆಯುವವನಾದರೆ ಸುನ್ನತಿಯೆಂಬ ಸಂಸ್ಕಾರವು ನಿನಗೆ ಪ್ರಯೋಜನಕರವಾಗಿದೆ; ಆದರೆ ನೀನು ಧರ್ಮಶಾಸ್ತ್ರವನ್ನು ಮೀರಿ ನಡೆಯುವವನಾಗಿದ್ದರೆ ನಿನಗೆ ಸುನ್ನತಿಯಿದ್ದರೂ ಇಲ್ಲದಂತಾಯಿತು.

Read ರೋಮಾ 2ರೋಮಾ 2
Compare ರೋಮಾ 2:20-25ರೋಮಾ 2:20-25